ಮೈಸೂರು

ಹಿರಿಯ ಮುತ್ಸದಿ ಶ್ರೀನಿವಾಸ್‌ ಪ್ರಸಾದ್‌ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಮೈಸೂರು: ರಾಜ್ಯ ಕಂಡ ಅಪ್ರತಿಮ ದಲಿತ ನಾಯಕ, ನೇರ ನಿಷ್ಠೂರವಾದಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಅವರ ಮೈಸೂರಿನ ನಿವಾಸಕ್ಕೆ ಇಂದು ಸಿಎಂ ಸಿದ್ದರಾಮಯ್ಯ ತೆರಳಿ ಅಂತಿಮ ದರ್ಶನ ಪಡೆದರು.

ಇನ್ನು ಪ್ರಸಾದ್‌ ಅವರ ಅಂತಿಮ ದರ್ಶನ ಪಡೆದ ಸಿಎಂ ಬಳಿಕ ಅವರ ಕುಟುಂಬದವರಿಗೆ ಸಾಂತ್ವಾನ ಹೇಳಿದರು. ಚುನಾವಣೆಗೆ ಕೆಲವು ದಿನಗಳು ಇರುವಂತೆಯೇ ಸತತ 7 ವರ್ಷಗಳಿಂದ ಮುನಿಸಿಕೊಂಡಿದ್ದ ಪ್ರಸಾದ್‌ ಹಾಗೂ ಸಿದ್ದರಾಮಯ್ಯ ಮತ್ತೆ ಒಂದಾದರು. ಮೈಸೂರು ಹಾಗೂ ಚಾಮರಾಜನಗರ ಕ್ಷೇತ್ರಗಳಲ್ಲಿ ಪ್ರಸಾದ್‌ ಅವರಿಗೆ ಹೆಚ್ಚಿನ ಬೆಂಬಲವಿದ್ದು, ಅವರ ಸಹಾಯಕ್ಕಾಗಿ ಸಿಎಂ ಬಂದಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ಪ್ರಸಾದ್‌ ಅವರ ಆರೋಗ್ಯ ವಿಚಾರಿಸಲು ತಾವು ಬಂದಿರುವುದಾಗಿ ಸಿಎಂ ಸಿದ್ದರಾಮಯ್ಯ ತಮ್ಮ ಹಳೆಯ ದೋಸ್ತಿಯನ್ನು ನೆನೆದರು. ಇದಾದ ಸ್ವಲ್ಪ ದಿನಗಳ ನಂತರ ತೀವ್ರ ಅನಾರೋಗ್ಯಕ್ಕೆ ತುತ್ತಾದ ಪ್ರಸಾದ್‌ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು.

ವಯೋ ಸಹಜ ಕಾಯಿಲೆ, ಬಹು ಅಂಗಾಂಗ ವೈಫಲ್ಯದಿಂದ ವಿ. ಶ್ರೀನವಾಸ್‌ ಪ್ರಸಾದ್‌ ಅವರು ಇಂದು ತಡರಾತ್ರಿ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಬಳಿಕ ಅವರನ್ನು ಮೈಸೂರಿನ ಅವರ ನಿವಾಸಕ್ಕೆ ಕರೆತರಲಾಯಿತು.

ನಂತರ ಅವರ ಅಭಿಮಾನಿಗಳ ದರ್ಶನಕ್ಕಾಗಿ ಅಶೋಕಪುರಂ ನ ಎಂಟಿಎಂ ಶಾಲೆಗೆ ಪಾರ್ಥಿವ ಶರೀರವನ್ನು ರವಾನಿಸಲಾಗಿದ್ದು, ನಾಳೆ (ಏ.30) ಮದ್ಯಾಹ್ನ ಬೌದ್ಧ ಧರ್ಮದ ವಿಧಿ ವಿಧಾನದ ಮೂಲಕ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಅವರ ಪುತ್ರಿ ಮಾಹಿತಿ ನೀಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…

42 mins ago

ಮಾದಪ್ಪನ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ…

51 mins ago

ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಸಿಐಡಿ ಕಸ್ಟಡಿಗೆ

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…

2 hours ago

ಸಾಲೂರು ಮಠಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…

2 hours ago

ನಂಜನಗೂಡು ತಾಯಿ-ಮಕ್ಕಳ ಆಸ್ಪತ್ರೆಗೆ ಶಾಸಕ ದರ್ಶನ್ ದಿಢೀರ್ ಭೇಟಿ, ಪರಿಶೀಲನೆ

ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…

2 hours ago

ಯತೀಂದ್ರ ಸಿದ್ದರಾಮಯ್ಯ ನಮ್ಮ ಹೈಕಮಾಂಡ್:‌ ಗಣಿಗ ರವಿಕುಮಾರ್‌ ವ್ಯಂಗ್ಯ

ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್.‌ ನಮಗೆ ಹೈಕಮಾಂಡ್‌ ನೋಟಿಸ್‌ ಕೊಡಬಹುದು. ಆದರೆ ಹೈಕಮಾಂಡ್‌ಗೆ ನಾವು ನೋಟಿಸ್‌ ಕೊಡಲು…

2 hours ago