ಎಚ್.ಡಿ ಕೋಟೆ : ತಾಲೂಕಿನ ಬೀಚನಹಳ್ಳಿಯ ಕಬಿನಿ ಜಲಾಶಯಕ್ಕೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬಾಗಿನ ಅರ್ಪಿಸಿದರು.
ಮುಂಗಾರಿನಲ್ಲಿ ರಾಜ್ಯದಲ್ಲೇ ಮೊದಲು ತುಂಬುವ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾದ ಜಲಾಶಯ ಕಳೆದ ಜೂನ್ ಮೊದಲ ವಾರದಲ್ಲೇ ತುಂಬಿತ್ತು. ಅಣೆಕಟ್ಟೆಯ ಗರಿಷ್ಠ ಮಟ್ಟ 2,284 ಅಡಿ ಇದ್ದು, ಇಂದಿನ ಮಟ್ಟ 2,283.33 ಅಡಿ ಹಾಗೂ 15 ಸಾವಿರ ಕ್ಯೂಸೆಕ್ ಒಳಹರಿವಿತ್ತು.
ಅಣೆಕಟ್ಟೆಯ ಕಾವಲು ಗೋಪುರದ ಬಳಿ ಬೆಳಿಗ್ಗೆ ಸಿಎಂ ಬಾಗಿನ ಅರ್ಪಿಸಿ, 32,25 ಕೋಟಿ ವೆಚ್ಚದ ಅಣೆಕಟ್ಟೆ ಪುನಶ್ಚೇತನ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು.
ಸಚಿವ ಮಹದೇವಪ್ಪ ಸೇರಿದಂತೆ ಶಾಸಕರು ಹಾಗೂ ಮತ್ತಿತರರು ಇದ್ದರು.




