ಮೈಸೂರು: ಕೃಷ್ಣರಾಜ ಸಾಗರ ಜಲಾಶಯ ತುಂಬಿದ್ದು, ಸಿಎಂ ಸಿದ್ದರಾಮಯ್ಯ ಅವರು ಇಂದು (ಸೋಮವಾರ, ಜು.೨೯) ಕೆಆರ್‌ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.
ಈ ಬೆನ್ನಲ್ಲೇ ಇಂದು ಮೈಸೂರಿನಿಂದ ಶ್ರೀರಂಗಪಟ್ಟಣದ ಕೆಆರ್‌ಎಸ್ ಜಲಾಶಯಕ್ಕೆ ಹೊರಡುವ ಮಧ್ಯೆ, ಮೈಸೂರಿನ ಹೆಸರಾಂತ ಮೈಲಾರಿ ಹೋಟೆಲ್‌ನಲ್ಲಿ ಬೆಳಗಿನ ಉಪಹಾರ ಸವಿದಿದ್ದಾರೆ.
ಮೈಸೂರಿನ ತಮ್ಮ ನಿವಾಸದಿಂದ ಕೆಆರ್ ಎಸ್ ಡ್ಯಾಂಗೆ ಬಾಗಿನ ಅರ್ಪಿಸಲು ತೆರಳುವ ಮುನ್ನ ಮೈಲಾರಿ ಹೋಟೆಲಿನಲ್ಲಿ ಬೆಳಗಿನ ಉಪಹಾರ ಸವಿದರು. ಸಿಎಂ ಅವರಿಗೆ ಮೈಸೂರಿನ ಮೈಲಾರಿ ಹೋಟೆಲ್ ಉಪಹಾರ ಅಚ್ಚುಮೆಚ್ಚು. ಸಿಎಂ ಸಿದ್ದರಾಮಯ್ಯ ಅವರು ಬಹುತೇಕ ಮೈಸೂರಿಗೆ ಬಂದಾಗಲೆಲ್ಲಾ ಈ ಹೋಟೆಲ್‌ನಲ್ಲಿ ಉಪಹಾರ ಸೇವಿಸಿಯೇ ಹೋಗಿದ್ದಾರೆ.