ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ನವೆಂಬರ್.20ರಿಂದ ಎರಡು ದಿನಗಳ ಕಾಲ ಮೈಸೂರು, ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ನವೆಂಬರ್.20ರಂದು ಸಿಎಂ ಸಿದ್ದರಾಮಯ್ಯ ಅವರು ಬೆಳಿಗ್ಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಚಾಮರಾಜನಗರಕ್ಕೆ ಆಗಮಿಸಲಿದ್ದಾರೆ.
ಚಾಮರಾಜನಗರ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯಲಿರುವ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ ಸಮಾರಂಭ-2025 ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಆ ದಿನವೇ ಮಧ್ಯಾಹ್ನ 3 ಗಂಟೆಗೆ ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ.
ನವೆಂಬರ್.21ರಂದು ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಸಿಎಂ ಸಿದ್ದರಾಮಯ್ಯ ಅವರು, ಮಧ್ಯಾಹ್ನ 3.30ಕ್ಕೆ ರಾಮಕೃಷ್ಣ ಆಶ್ರಮದ ಶತಮಾನೋತ್ಸವ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಅಂದು ರಾತ್ರಿ 8 ಗಂಟೆಗೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.





