Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಪ್ರೊ.ಬಿ.ಪಿ ಮಹೇಶ್‌ ಚಂದ್ರಗುರು ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಮೈಸೂರು: ಸಾಮಾಜಿಕ ಚಿಂತಕ ಹಾಗೂ ಮೈಸೂರು ವಿವಿ ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಪಿ ಮಹೇಶ್‌ ಚಂದ್ರಗುರು(68) ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಸಂತಾಪ ಸೂಚಿಸಿರುವ ಅವರು, ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಡಾ.ಮಹೇಶ್ ಚಂದ್ರ ಗುರು ಅವರು ತರಗತಿಗಳಿಂದ ಹೊರಗೆ ಕೂಡಾ ಸಮಾಜಕ್ಕೆ ಮಾರ್ಗದರ್ಶಕರಾಗಿದ್ದರು. ಬುದ್ದ, ಬಸವ, ಅಂಬೇಡ್ಕರ್ ಚಿಂತನೆಗಳಿಂದ ಪ್ರಭಾವಿತರಾಗಿದ್ದ ಡಾ.ಮಹೇಶ್ ಚಂದ್ರ ಗುರು ಎಂದೂ ಮೌನಕ್ಕೆ ಮೊರೆಹೋಗದೆ ಮತ್ತು ಪರಿಣಾಮವನ್ನೂ ಲೆಕ್ಕಿಸದೆ ನೇರವಾಗಿ ಮತ್ತು ನಿಷ್ಠುರವಾಗಿ ತಮ್ಮ ಅಭಿಪ್ರಾಯ ಮಂಡಿಸುತ್ತಿದ್ದರು.

ಡಾ.ಮಹೇಶ್ ಚಂದ್ರ ಗುರು ಅವರ ನಿಧನದಿಂದ ಸಮಾಜ ಒಬ್ಬ ಚಿಂತನಶೀಲ ಮಾರ್ಗದರ್ಶಕನನ್ನು ಕಳೆದುಕೊಂಡಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

Tags: