ಮೈಸೂರು: ಸಾಮಾಜಿಕ ಚಿಂತಕ ಹಾಗೂ ಮೈಸೂರು ವಿವಿ ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಪಿ ಮಹೇಶ್ ಚಂದ್ರಗುರು(68) ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಸಂತಾಪ ಸೂಚಿಸಿರುವ ಅವರು, ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಡಾ.ಮಹೇಶ್ ಚಂದ್ರ ಗುರು ಅವರು ತರಗತಿಗಳಿಂದ ಹೊರಗೆ ಕೂಡಾ ಸಮಾಜಕ್ಕೆ ಮಾರ್ಗದರ್ಶಕರಾಗಿದ್ದರು. ಬುದ್ದ, ಬಸವ, ಅಂಬೇಡ್ಕರ್ ಚಿಂತನೆಗಳಿಂದ ಪ್ರಭಾವಿತರಾಗಿದ್ದ ಡಾ.ಮಹೇಶ್ ಚಂದ್ರ ಗುರು ಎಂದೂ ಮೌನಕ್ಕೆ ಮೊರೆಹೋಗದೆ ಮತ್ತು ಪರಿಣಾಮವನ್ನೂ ಲೆಕ್ಕಿಸದೆ ನೇರವಾಗಿ ಮತ್ತು ನಿಷ್ಠುರವಾಗಿ ತಮ್ಮ ಅಭಿಪ್ರಾಯ ಮಂಡಿಸುತ್ತಿದ್ದರು.
ಡಾ.ಮಹೇಶ್ ಚಂದ್ರ ಗುರು ಅವರ ನಿಧನದಿಂದ ಸಮಾಜ ಒಬ್ಬ ಚಿಂತನಶೀಲ ಮಾರ್ಗದರ್ಶಕನನ್ನು ಕಳೆದುಕೊಂಡಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…