Mysore
22
haze

Social Media

ಶನಿವಾರ, 27 ಡಿಸೆಂಬರ್ 2025
Light
Dark

ಮೈಲಾರಿ ಹೋಟೆಲ್‌ನಲ್ಲಿ ತಿಂಡಿ ಸವಿದು, ಕಾಲೇಜು ದಿನಗಳನ್ನು ನೆನದ ಸಿಎಂ ಸಿದ್ದರಾಮಯ್ಯ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಮೇ.24) ಬೆಳಿಗ್ಗೆ ನಗರದ ನಜರ್‌ಬಾದ್‌ನಲ್ಲಿರುವ ಮೈಲಾರಿ ಹೋಟೆಲ್‌ನಲ್ಲಿ ತಿಂಡಿ ಸವಿದು, ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೊಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ,  ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ತಿಂಡಿ ತಿನ್ನುವಾಗ ನನ್ನ ಕಾಲೇಜು ದಿನಗಳು ನೆನಪಾದವು. ನನ್ನ ಬದುಕಿನ ಅವಿಸ್ಮರಣೀಯ ನೆನಪುಗಳೆಲ್ಲವೂ ಮೈಸೂರಿನ ಜೊತೆ ಬೆಸೆದುಕೊಂಡಿವೆ. ಮೈಸೂರು ನನಗೆ ಹುಟ್ಟೂರು ಮಾತ್ರವಲ್ಲ ಬದುಕು ಕೊಟ್ಟ ಊರು. ದೈಹಿಕವಾಗಿ ದೂರವಿದ್ದಾಗಲೂ ಮೈಸೂರಿನ ನೆನಪು ಮನಸ್ಸಿಗೆ ಸದಾ ಹತ್ತಿರವಾಗಿರುತ್ತದೆ. ಈ ಮಣ್ಣಿನ ಋಣ ಬಹಳ ದೊಡ್ಡದು, ಅದರೆದುರು ನಾವು ಸಣ್ಣವರು ಎಂದು ಬರೆದುಕೊಂಡಿದ್ದಾರೆ.

ಹೋಟೆಲ್‌ನಲ್ಲಿ ಅವರಿಗಿಷ್ಟವಾದ ಇಡ್ಲಿ, ದೋಸೆ ಯನ್ನು ಸವಿದಿದ್ದಾರೆ. ಈ ವೇಳೆ ಸಚಿವರಾದ ಎಚ್.ಸಿ ಮಹದೇವಪ್ಪ, ಕೆ.ಮಹದೇವ  ಹಾಗೂ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಇದ್ದರು.

Tags:
error: Content is protected !!