ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಮೇ.24) ಬೆಳಿಗ್ಗೆ ನಗರದ ನಜರ್‌ಬಾದ್‌ನಲ್ಲಿರುವ ಮೈಲಾರಿ ಹೋಟೆಲ್‌ನಲ್ಲಿ ತಿಂಡಿ ಸವಿದು, ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೊಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ತಿಂಡಿ ತಿನ್ನುವಾಗ ನನ್ನ ಕಾಲೇಜು ದಿನಗಳು ನೆನಪಾದವು. ನನ್ನ ಬದುಕಿನ ಅವಿಸ್ಮರಣೀಯ ನೆನಪುಗಳೆಲ್ಲವೂ ಮೈಸೂರಿನ ಜೊತೆ ಬೆಸೆದುಕೊಂಡಿವೆ. ಮೈಸೂರು ನನಗೆ ಹುಟ್ಟೂರು ಮಾತ್ರವಲ್ಲ ಬದುಕು ಕೊಟ್ಟ ಊರು. ದೈಹಿಕವಾಗಿ ದೂರವಿದ್ದಾಗಲೂ ಮೈಸೂರಿನ ನೆನಪು ಮನಸ್ಸಿಗೆ ಸದಾ ಹತ್ತಿರವಾಗಿರುತ್ತದೆ. ಈ ಮಣ್ಣಿನ ಋಣ ಬಹಳ ದೊಡ್ಡದು, ಅದರೆದುರು ನಾವು ಸಣ್ಣವರು ಎಂದು ಬರೆದುಕೊಂಡಿದ್ದಾರೆ.
ಹೋಟೆಲ್‌ನಲ್ಲಿ ಅವರಿಗಿಷ್ಟವಾದ ಇಡ್ಲಿ, ದೋಸೆ ಯನ್ನು ಸವಿದಿದ್ದಾರೆ. ಈ ವೇಳೆ ಸಚಿವರಾದ ಎಚ್.ಸಿ ಮಹದೇವಪ್ಪ, ಕೆ.ಮಹದೇವ ಹಾಗೂ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಇದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…