ಮೈಸೂರು

ಮದ್ದೂರು ವಡೆ ಸವಿದ ಸಿಎಂ ಸಿದ್ದರಾಮಯ್ಯ

ಮದ್ದೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಆಯೋಜನೆಯಾಗಿದ್ದ ಸ್ವಾಭಿಮಾನಿಗೆ ಸಾವಿರದ ನುಡಿನಮನ ಕಾರ್ಯಕ್ರಮ ಮುಗಿಸಿ ವಾಪಾಸ್ ಬೆಂಗಳೂರಿಗೆ ಮರಳುವ ವೇಳೆ ಮದ್ದೂರಿನಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಮದ್ದೂರು ಟಿಫಾನೀಸ್ ಮಾಲೀಕ ರಾಮಕೃಷ್ಣ ಅವರು ನೀಡಿದ ಮದ್ದೂರು ವಡೆಯನ್ನು ಕಾರಿನಲ್ಲೇ ಕುಳಿತು ಸವಿದರು.

ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಶ್ರೀನಿವಾಸ ಪ್ರಸಾದ್‌ ನಿಧನದಿಂದ ಹಳೆ ತಲೆಮಾರಿನ ರಾಜಕಾರಣಿಗಳ ಕೊಂಡಿ ಕಳಚಿಹೋಗಿದೆ ಎಂದು ವಿಷಾದ ವ್ಯಕ್ತಪಡಿಸಿದರು. ಪ್ರಸಾದ್‌ ಅವರು ಮನುಷ್ಯತ್ವದ ಬಗ್ಗೆ ಗೌರವ ಇಟ್ಟಿದ್ದರು. ಹೀಗಾಗಿ ಯಾವುದೇ ಪಕ್ಷದಲ್ಲಿದ್ದರೂ ಮನುಷ್ಯತ್ವಕ್ಕೆ ಗೌರವ ನೀಡುತ್ತಿದ್ದರು ಎಂದರು.

ಯಾರಿಗೆಲ್ಲಾ ರಾಜಕಾರಣದಲ್ಲಿ ಬುದ್ಧ, ಬಸವ, ಗಾಂಧಿ ಹಾಗೂ ಅಂಬೇಡ್ಕರ್‌ ಅವರ ಬಗ್ಗೆ ಕ್ಲ್ಯಾರಿಟಿ ಇರುತ್ತದೆ ಅವರೆಲ್ಲರಿಗೂ ಮನುಷ್ಯತ್ವದ ಪರವಾಗಿ ಇರಲು ಸಾಧ್ಯ. ಶ್ರೀನಿವಾಸ ಪ್ರಸಾದ್‌ ಅವರಿಗೆ ಆ ಕ್ಲ್ಯಾರಿಟಿ ಇತ್ತು ಎಂದು ತಿಳಿಸಿದರು.

ರಾಜಕೀಯದಲ್ಲಿದ್ದಾಗ ಪರಸ್ಪರ ಟೀಕೆ ಮಾಡುವುದು ಸ್ವಾಭಾವಿಕ. ಶ್ರೀನಿವಾಸ ಪ್ರಸಾದ್‌ ಅವರು ನನ್ನನ್ನು ಅನೇಕ ಬಾರಿ ಟೀಕೆ ಮಾಡಿದ್ದಾರೆ. ನಾನೂ ಅನೇಕ ಬಾರಿ ಅವರ ಬಗ್ಗೆ ಮಾತನಾಡಿದ್ದೇನೆ. ಆದರೆ ನಮ್ಮಿಬ್ಬರ ಸ್ನೇಹಕ್ಕೆ ಎಂದಿಗೂ ಧಕ್ಕೆ ಬಂದಿರಲಿಲ್ಲ ಎಂದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ನೀತಿ ಪಾಠಗಳು ಶಿಕ್ಷಣ ಭಾಗವಾಗಬೇಕೆಂಬ ಸಲಹೆ ಸ್ವಾಗತಾರ್ಹ

ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…

5 hours ago

ಓದುಗರ ಪತ್ರ: ವಿಚ್ಛೇದನಗಳೂ ದುಬಾರಿಯಾಗಿವೇ!

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…

5 hours ago

ಓದುಗರ ಪತ್ರ: 3 ಕೋಟಿ ರೂ. ವೆಚ್ಚದ ಬಸ್ ನಿಲ್ದಾಣ ಜನರಿಗೋ, ಖಾಸಗಿ ವಾಹನಗಳಿಗೋ?

ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…

5 hours ago

ಬಹುತ್ವ ಭಾರತ ನೀತಿಗೆ ಮೋಹನ್ ಭಾಗವತ್ ಬದ್ಧರೇ?

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…

5 hours ago

ವಿಶ್ವದಾಖಲೆಗೆ ಕಾಯುತ್ತಿರುವ ಅರಿವೆಯ ಮೇಲಿನ ಮದರಂಗಿ ಚಿತ್ತಾರ

ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…

5 hours ago

ಅಧ್ಯಾತ್ಮದ ಅಮಲಿನಲ್ಲಿ ದಾರಿ ತಪ್ಪಿದ ತರುಣ ತರುಣಿಯರು

ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…

5 hours ago