ಮೈಸೂರು: ಕಾಲು ನೋವಿನಿಂದ ವಿಶ್ರಾಂತಿಯಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ತಿಂಗಳ ಬಳಿಕ ಮೈಸೂರಿಗೆ ಆಗಮಿಸಿದ್ದರಿಂದ ನೂರಾರು ಸಾರ್ವಜನಿಕರ ಆಹವಾಲು ಆಲಿಸಿದರು.
ಶಾರದಾದೇವಿನಗರದಲ್ಲಿರುವ ತಮ್ಮ ನಿವಾಸದಲ್ಲಿ ವಾಸ್ತವ್ಯ ಹೂಡಿದ್ದ ಸಿಎಂ, ಶನಿವಾರ ಬೆಳಿಗ್ಗೆ ವರುಣ, ಚಾಮುಂಡೇಶ್ವರಿ ಕ್ಷೇತ್ರದ ಮುಖಂಡರೊಂದಿಗೆ ಚರ್ಚಿಸಿದರು.
ನಂತರ, ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಬರಮಾಡಿಕೊಂಡು ಸಮಾಲೋಚಿಸಿದರು. ನಂತರ, ಹೊರ ಬಂದ ಸಿಎಂ ಮುಂಜಾನೆಯಿಂದ ಕಾದು ನಿಂತಿದ್ದವರ ಬಳಿ ಮನವಿ ಪತ್ರಗಳನ್ನು ಸ್ವೀಕರಿಸಿದರು.
ಒಬ್ಬೊಬ್ಬರಾಗಿ ಮನವಿ ಪತ್ರಗಳನ್ನು ಸ್ವೀಕರಿಸಿ ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಅಗತ್ಯ ಕ್ರಮಕೈಗೊಳ್ಳುವಂತೆ ಹೇಳಿದರೆ, ಹಲವು ಅರ್ಜಿಗಳಿಗೆ ಪರಿಶೀಲಿಸುವ ಮಾತು ಹೇಳಿದರು.
ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಅವರಿಗೆ ನಾಗರಿಕರು ಸಲ್ಲಿಸಿದ ಅರ್ಜಿಯನ್ನು ಕೊಟ್ಟು ಸಾಧ್ಯವಾದಷ್ಟು ಮಟ್ಟಿಗೆ ಪರಿಹಾರ ಕಲ್ಪಿಸಬೇಕು ಎಂದು ಸೂಚಿಸಿದರು.
ಈ ವೇಳೆ ಹಲವರು ಮದುವೆ, ಗೃಹಪ್ರವೇಶದ ಆಹ್ವಾನ ಪತ್ರಿಕೆಯನ್ನು ನೀಡಿದರು. ಇದನ್ನು ಆಪ್ತಸಹಾಯಕರ ಕೈಗೆ ಕೊಟ್ಟು ಇದನ್ನು ನೋಡಿ ಸಹಾಯ ಮಾಡುವಂತೆ ಹೇಳಿದರು.
ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…
ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…
ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…
ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…