ಮೈಸೂರು : ಸಾಲ ತೀರಿಸಲು ಕಟ್ಟಿದ ಮನೆ ಮಾರಿಬಿಟ್ಟೆ ಒಂದು ದಿನವೂ ವಾಸ ಮಾಡಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ನಗರದ ಮಹಾರಾಜ ಮೈದಾನದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬ್ಯಾಂಕ್‌ನಲ್ಲಿ ಸಾಲ ಮಾಡಿ ಮೈಸೂರಿನ ವಿಜಯನಗರದಲ್ಲಿ ಕಟ್ಟಿದ್ದ ಮನೆಯನ್ನು ಸಾಲ ತೀರಿಸಲು ಮಾರಿಬಿಟ್ಟೆ. ಇದು ನನ್ನ ಇತಿಹಾಸ ಎಂದು ಸಿದ್ದರಾಮಯ್ಯ ಹೇಳಿದರು.
ಮನೆ ಕಟ್ಟಲು ಕೋ-ಆಪರೇಟಿವ್ ಬ್ಯಾಂಕ್‌ನಿಂದ ಸಾಲ ಪಡೆದಿದ್ದೆ. ಸಾಲ ಕಟ್ಟಿಲ್ಲ ಎಂದು ಬ್ಯಾಂಕ್‌ನಿಂದ ನೋಟಿಸ್ ಬಂದಿತ್ತು. ಹೀಗಾಗಿ ಕಟ್ಟಿದ ಮನೆಯಲ್ಲಿ ಒಂದು ದಿನವೂ ವಾಸ ಮಾಡದೆ ಮನೆಯನ್ನೇ ಮಾರಿ ಬ್ಯಾಂಕ್ ಸಾಲ ತೀರಿಸಿದೆ ಎಂದರು.
ಈಗ ಒಂದು ಮನೆ ನಿರ್ಮಾಣ ಮಾಡುತ್ತಿದ್ದೇನೆ. ಅದನ್ನು ಹೊತುಪಡಿಸಿ ಮೈಸೂರಿನಲ್ಲಿ ನನ್ನ ಹೆಸರಿನಲ್ಲಿ ಒಂದೇ ಒಂದು ಸೈಟ್ ಇದ್ದರೆ ಯಾರಾದರು ತೋರಿಸಲಿ ಎಂದು ವಿಪಕ್ಷಗಳಿಗೆ ಸಾವಾಲು ಎಸೆದರು.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…