ಮೈಸೂರು

ಆಸ್ತಿ ಇತಿಹಾಸ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ಮೈಸೂರು : ಸಾಲ ತೀರಿಸಲು ಕಟ್ಟಿದ ಮನೆ ಮಾರಿಬಿಟ್ಟೆ ಒಂದು ದಿನವೂ ವಾಸ ಮಾಡಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಗರದ ಮಹಾರಾಜ ಮೈದಾನದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್‌ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬ್ಯಾಂಕ್‌ನಲ್ಲಿ ಸಾಲ ಮಾಡಿ ಮೈಸೂರಿನ ವಿಜಯನಗರದಲ್ಲಿ ಕಟ್ಟಿದ್ದ ಮನೆಯನ್ನು ಸಾಲ ತೀರಿಸಲು ಮಾರಿಬಿಟ್ಟೆ. ಇದು ನನ್ನ ಇತಿಹಾಸ ಎಂದು ಸಿದ್ದರಾಮಯ್ಯ ಹೇಳಿದರು.

ಮನೆ ಕಟ್ಟಲು ಕೋ-ಆಪರೇಟಿವ್‌ ಬ್ಯಾಂಕ್‌ನಿಂದ ಸಾಲ ಪಡೆದಿದ್ದೆ. ಸಾಲ ಕಟ್ಟಿಲ್ಲ ಎಂದು ಬ್ಯಾಂಕ್‌ನಿಂದ ನೋಟಿಸ್‌ ಬಂದಿತ್ತು. ಹೀಗಾಗಿ ಕಟ್ಟಿದ ಮನೆಯಲ್ಲಿ ಒಂದು ದಿನವೂ ವಾಸ ಮಾಡದೆ ಮನೆಯನ್ನೇ ಮಾರಿ ಬ್ಯಾಂಕ್‌ ಸಾಲ ತೀರಿಸಿದೆ ಎಂದರು.

ಈಗ ಒಂದು ಮನೆ ನಿರ್ಮಾಣ ಮಾಡುತ್ತಿದ್ದೇನೆ. ಅದನ್ನು ಹೊತುಪಡಿಸಿ ಮೈಸೂರಿನಲ್ಲಿ ನನ್ನ ಹೆಸರಿನಲ್ಲಿ ಒಂದೇ ಒಂದು ಸೈಟ್‌ ಇದ್ದರೆ ಯಾರಾದರು ತೋರಿಸಲಿ ಎಂದು ವಿಪಕ್ಷಗಳಿಗೆ ಸಾವಾಲು ಎಸೆದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

7 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

7 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

7 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

7 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

7 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

9 hours ago