ಮೈಸೂರು

ಇ.ಡಿ. ತನಿಖೆ ರಾಜಕೀಯ ಪ್ರೇರಿತ| ನನ್ನ ಹೆಸರು ಕೆಡಿಸಲು ಪ್ರಯತ್ನ: ಸಿಎಂ ಸಿದ್ದರಾಮಯ್ಯ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ತನಿಖೆ ನಡೆಸುತ್ತಿರುವುದು ರಾಜಕೀಯ ಪ್ರೇರಿತವಾಗಿದೆ. ನಾನು ಸಿಎಂ ಆಗಿದ್ದು, ಉದ್ದೇಶ ಪೂರ್ವಕವಾಗಿ ನನ್ನ ಹೆಸರನ್ನು ಕೆಡಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು(ಜನವರಿ.31) ಇ.ಡಿ. ಸಂಸ್ಥೆಯೂ ಪಾರ್ವತಿ ಸಿದ್ದರಾಮಯ್ಯ ಅವರಿಗೆ ನೀಡಿರುವ ನೋಟಿಸ್‌ನಲ್ಲಿ ಅಕ್ರಮ ಹಣ ವರ್ಗಾವಣೆ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಕೇಸ್‌ನಲ್ಲಿ ನಾನು ಮತ್ತು ನನ್ನ ಕುಟುಂಬ ತಪ್ಪು ಮಾಡಿಲ್ಲ. ಹಾಗಾಗಿ ಈ ಕೇಸ್‌ನಲ್ಲಿ ಅಕ್ರಮ ಹಣ ವರ್ಗಾವಣೆ ಹೇಗಾಗುತ್ತದೆ? ಈಗ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಸಂಸ್ಥೆ ಸ್ವತಂತ್ರ ತನಿಖೆ ಅಲ್ಲವೇ ಬೇಕು ಎಂದೇ
ಇ.ಡಿ.ಅಧಿಕಾರಿಗಳು ನನ್ನನ್ನು ಟಾರ್ಗೆಟ್‌ ಮಾಡಿ ತನಿಖೆ ನಡೆಸುತ್ತಿದ್ದಾರೆ. ಇ.ಡಿ. ತನಿಖೆ ರಾಜಕೀಯ ಪ್ರೇರಿತವಾಗಿದೆ ಎಂದರು.

ಇ.ಡಿ. ರಿಲೀಸ್‌ ಮಾಡಿರುವುದು ತನಿಖಾ ವರದಿ ಅಲ್ಲ, ಅದು ಜಪ್ತಿ ಆದೇಶ. ನಾನು ರಾಜ್ಯದ ಮುಖ್ಯಮಂತ್ರಿಯಾಗಿದ್ದೇನೆ, ನನ್ನ ಹೆಸರು ಕೆಡಿಸಲು ಪ್ರಯತ್ನ ಮಾಡಿ, ಉದ್ದೇಶ ಪೂರ್ವಕವಾಗಿ ಟಾರ್ಗೆಟ್‌ ಮಾಡುತ್ತಿದ್ದಾರೆ. ಅಕ್ರಮ ಹಣ ವರ್ಗಾವಣೆ ಆಗಿರವುದಕ್ಕೆ ಸಾಕ್ಷಿ ಏನಿದೆ? ಇದು ಮನಿ ಲಾಂಡರಿಂಗ್‌ ಬರಲ್ಲ. ಹೀಗಾಗಿ ನನ್ನ ಹೆಸರಿಗೆ ಮಸಿ ಬಳಿಯುವ ಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಇದೇ ವೇಳೆ ಮಹಾಕುಂಭಮೇಳದ ಬಗ್ಗೆ ಮಾತನಾಡುವವರು ಅಯೋಗ್ಯರು ಎಂಬ ಬಿ.ವೈ.ವಿಜಯೇಂದ್ರ ಅವರ ಹೇಳಿಕೆ ಬಗ್ಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಾಲಿಷ ಹೇಳಿಕೆ ನೀಡಿದ್ದಾರೆ. ಮಹಾಕುಂಭಮೇಳದ ನಡೆಯುತ್ತಿರುವುದು ಎಲ್ಲಿ? ಹಾಗಾದರೆ ಅವರು ಅಯೋಗ್ಯರಾ? ಎಂದು ಪ್ರಶ್ನಿಸಿದರು.

ಇನ್ನೂ ಸಿಎಂ ವಿಚಾರದ ಚರ್ಚೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದಲ್ಲಿ ಎಲ್ಲಾ ತೀರ್ಮಾನವನ್ನು ಹೈಕಮಾಂಡ್‌ ತೆಗೆದುಕೊಳ್ಳಲಿದ್ದು,  ಮುಖ್ಯಮಂತ್ರಿ ಸ್ಥಾನದ ಕುರಿತು ಹೈಕಮಾಂಡ್‌ ನಿರ್ಧಾರ ಮಾಡುತ್ತದೆ. ಹೀಗಾಗಿ ನಾನು ಸಿಎಂ ಸ್ಥಾನದ ಬಗ್ಗೆ ಎಷ್ಟು ಬಾರಿ ಮಾತನಾಡಬೇಕು. ಸಚಿವರು ಮಾತನಾಡಿದ ತಕ್ಷಣ ಸಿಎಂ ಸ್ಥಾನದ ವಿಚಾರ ಆಗುತ್ತಾ? ಎಂದು ಪ್ರಶ್ನಿಸಿದರು. 3-4 ಸಚಿವರು ಸೇರಿದಾಗ ರಾಜಕೀಯ ಚರ್ಚೆ ಮಾಡುತ್ತೇವೆ ಅಷ್ಟೇ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ:  ಚರಂಡಿಯಲ್ಲಿ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…

24 mins ago

ಓದುಗರ ಪತ್ರ:  ಸಾರ್ವಜನಿಕ ಶೌಚಾಲಯಗಳ ಬೀಗ ತೆರೆಯಿರಿ

ಮೈಸೂರಿನ ಮೆಟ್ರೋ ಪೋಲ್ ವೃತ್ತದ ಹತ್ತಿರ (ಮಹಾರಾಣಿ ಕಾಲೇಜು) ಮತ್ತು ಗಂಡಭೇರುಂಡ ಉದ್ಯಾನವನದ ಮುಂಭಾಗದಲ್ಲಿ ಹಾಗೂ ಕುವೆಂಪುನಗರದ ಉದಯರವಿ ರಸ್ತೆಯಲ್ಲಿ…

36 mins ago

ಓದುಗರ ಪತ್ರ: ಅನಗತ್ಯ ಸಿಸೇರಿಯನ್: ಆಸ್ಪತ್ರೆಗಳ ವಿರುದ್ಧ ಕ್ರಮ ಸ್ವಾಗತಾರ್ಹ

ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ…

42 mins ago

ಪಂಜು ಗಂಗೊಳ್ಳಿ ವಾರದ ಅಂಕಣ: ವಿಕಲಾಂಗರ ಬದುಕಿಗೆ ಚಲನೆ ನೀಡುವ ಸಂದೀಪ್ ತಲ್ವಾರ್

ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್‌ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…

1 hour ago

ನವೆಂಬರ್‌ನಲ್ಲೇ 1.59 ಕೋಟಿ ರೂ ರಾಜಸ್ವ ಸಂಗ್ರಹ

ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…

4 hours ago

ಅದ್ದೂರಿಯಾಗಿ ನೆರವೇರಿದ ಶ್ರೀ ಮುತ್ತುರಾಯಸ್ವಾಮಿ ಜಾತ್ರೆ

ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…

4 hours ago