Mysore
28
few clouds

Social Media

ಸೋಮವಾರ, 17 ಫೆಬ್ರವರಿ 2025
Light
Dark

ಕೊರೊನಾ ಹಗರಣ: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ

ಮೈಸೂರು: ಬಿಜೆಪಿ ಆಡಳಿತದ ಕೊರೊನಾ ಕಾಲಾವಧಿಯ ವೇಳೆ ನಡೆದಿದೆ ಎನ್ನಲಾದ ಅಕ್ರಮ ಹಗರಣ ವಿಚಾರಕ್ಕೆ ಸಂಬಂಧಿಸಿದಂತೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು.

ನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೊರೊನಾ​​ ಹಗರಣದ ಮಧ್ಯಂತರ ವರದಿಯನ್ನು ಮುಂದಿನ ಸಚಿವ ಸಂಪುಟದ ಮುಂದೆ ಮಂಡಿಸುತ್ತೇನೆ. ಸಂಪುಟದಲ್ಲಿ ಚರ್ಚೆ ಮಾಡಿ ಮುಂದಿನ ತೀರ್ಮಾನ ಹೇಳುತ್ತೇನೆ. ವರದಿಯಲ್ಲಿ ಏನಿದೆ ಎಂಬುದನ್ನು ನಾನು ನೋಡಿಲ್ಲ. ಎಷ್ಟು ಪ್ರಮಾಣದ ಭ್ರಷ್ಟಾಚಾರ ಆಗಿದೆ ಎಂಬುದು ಗಮನಕ್ಕೆ ಬಂದಿಲ್ಲ ಎಂದರು.

ಮುಂದುವರಿದು ನನ್ನ ಗಮನಕ್ಕೆ ಬರದೆ ಸುಧಾಕರ್​​ಗೆ ಮಾಹಿತಿ ಕೊಟ್ಟವರು ಯಾರು? ಕುಂಬಳಕಾಯಿ‌ ಕಳ್ಳ ಅಂದ್ರೆ ಏಕೆ ಹೆಗಲು ಮುಟ್ಟಿಕೊಳ್ಳಬೇಕು? ಸುಧಾಕರ್ ಗೆ ತಪ್ಪು ಮಾಡಿರುವುದು ಮಾನಸಿಕವಾಗಿ ಗೊತ್ತಿದೆ. ಹೀಗಾಗಿ ಅವನು ಆ ರೀತಿ ಮಾತನಾಡುತ್ತಿದ್ದಾನೆ ಎಂದು ಸಿಎಂ ಹೇಳಿದರು.

Tags: