ಮೈಸೂರು

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

20ರಂದು ಬೆಳಿಗ್ಗೆ 11.25ಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿಯುವರು. ಮಧ್ಯಾಹ್ನ 12ಕ್ಕೆ ನಗರದ ಕಲಾಮಂದಿರದಲ್ಲಿ ಜಿಲ್ಲಾ ಬಸವ ಬಳಗಗಳ ಒಕ್ಕೂಟ, ಅಖಿಲ ಭಾರತ ವೀರಶೈವ ಮಹಾಸಭಾ, ವೀರಶೈವ ಲಿಂಗಾಯತ ಸಂಸ್ಥೆ ಒಕ್ಕೂಟದಿಂದ ಆಯೋಜಿಸಿರುವ ‘ಬಸವ ಜಯಂತಿ-2026 ಉದ್ಘಾಟನೆ ಹಾಗೂ 2026ನೇ ಸಾಲಿನ ‘ಬಸವಶ್ರೀ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳುವರು.

ಮಧ್ಯಾಹ್ನ 2.45ಕ್ಕೆ ರಸ್ತೆ ಮಾರ್ಗವಾಗಿ ಹುಣಸೂರು ತಾಲ್ಲೂಕಿನ ಉಕ್ಕಿನಕಂತೆ ಮಠಕ್ಕೆ ತೆರಳಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಆಯೋಜಿಸಿರುವ ಬಸವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. 3.15ಕ್ಕೆ ಹುಣಸೂರಿನಲ್ಲಿ ಕನಕ ಭವನದಲ್ಲಿ ತಾಲ್ಲೂಕು ಕುರುಬರ ಅಭಿವೃದ್ಧಿ ಸಮಿತಿಯಿಂದ ಹಮ್ಮಿಕೊಂಡಿರುವ ಗಣಪತಿ ದೇವಸ್ಥಾನದ ಉದ್ಘಾಟನೆ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4.30ಕ್ಕೆ ಗ್ರಾಮದೇವತೆ ಮುತ್ತು ಮಾರಮ್ಮ ದೇವಸ್ಥಾನದ 23 ನೇ ವಾರ್ಷಿಕೋತ್ಸವ, ಬೆಳ್ಳಿರಥ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವರು. 5.30ಕ್ಕೆ ಸಿಟಿಒ ಕಾಲೊನಿಯಲ್ಲಿ ಕನಕ ಸಾಂಸ್ಕ ತಿಕ ಭವನ ಉದ್ಘಾಟನೆ, ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 7.15ಕ್ಕೆ ನಗರಕ್ಕೆ ಆಗಮಿಸಿ ವಾಸ್ತವ್ಯ ಹೂಡುವರು.

21ರಂದು ಬೆಳಿಗ್ಗೆ 11ಕ್ಕೆ ಹೆಲಿಕಾಪ್ಟರ್‌ನಲ್ಲಿ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯ ಡಿ.ದೇವರಾಜ ಅರಸು ಕ್ರೀಡಾಂಗಣದಲ್ಲಿ ನಡೆಯುವ ‘110 ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ’ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮಧ್ಯಾಹ್ನ 1.30ರ ವೇಳೆಗೆ ಹೆಲಿಕಾಪ್ಟರ್‌ನಲ್ಲಿ ಪಿರಿಯಾಪಟ್ಟಣ ತಾಲ್ಲೂಕು ಕ್ರೀಡಾಂಗಣಕ್ಕೆ ಬಂದಿಳಿಯುವರು. ಬಳಿಕ, ಅಲ್ಲಿನ ಹಬಟೂರು ರಸ್ತೆಯ ಪಾರೆಕೊಪ್ಪಲಿನಲ್ಲಿ ನಡೆಯಲಿರುವ ಮಸಣಿಕಮ್ಮ ದೇವಸ್ಥಾನ ನಿರ್ಮಾಣ, ತಾಲ್ಲೂಕು ಒಕ್ಕಲಿಗರ ಸಂಘದ ಸಹಯೋಗದಲ್ಲಿ ನಿರ್ಮಿಸುತ್ತಿರುವ ಕುವೆಂಪು ಭವನ, ಬೆಟ್ಟದಪುರದ ಸಿಡಿಲು ಮಲ್ಲಿಕಾರ್ಜುನ ದೇವಸ್ಥಾನ ಸಂಪರ್ಕಿಸುವ ರಸ್ತೆ ನಿರ್ಮಾಣ ಕಾರ್ಯಕ್ಕೆ ಚಾಲನೆ, ವಿವಿಧ ಇಲಾಖೆಗಳಿಂದ 419.78 ಕೋಟಿ ಮೊತ್ತದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4.20ಕ್ಕೆ ಹೆಲಿಕಾಪ್ಟರ್‌ನಲ್ಲಿ ಮಂಡಕಳ್ಳಿ ವಿಮಾನನಿಲ್ದಾಣಕ್ಕೆ ಬಂದು, ಸಂಜೆ 6ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತೆರಳುವರು.

ಆಂದೋಲನ ಡೆಸ್ಕ್

Recent Posts

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

5 mins ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

5 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

5 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

5 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

5 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

5 hours ago