ಮೈಸೂರು

ವಸ್ತುಪ್ರದರ್ಶನ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು : ಭಾನುವಾರ ಬೆಳಿಗ್ಗೆ ವಸ್ತು ಪ್ರದರ್ಶನ ಆವರಣದ ಅಧ್ಯಕ್ಷರ ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ವಸ್ತು ಪ್ರದರ್ಶನ ವೀಕ್ಷಿಸಿ, ಅಭಿವೃದ್ಧಿ ಕಾರ್ಯಗಳು ಉತ್ತಮವಾಗಿ ನಡೆಯುತ್ತಿವೆ ಎಂದು ಅಧ್ಯಕ್ಷ ಅಯೂಬ್‌ಖಾನ್ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದರು.

ಮಾಜಿ ಶಾಸಕ ಸಂದೇಶ್ ನಾಗರಾಜ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು, ಕಾರ್ಯಕ್ರಮಕ್ಕೆ ತೆರಳುವ ಮುನ್ನ ಪ್ರಾಽಕಾರದ ಅಧ್ಯಕ್ಷ ಅಯೂಬ್‌ಖಾನ್ ಅವರ ಕಚೇರಿ ಆವರಣಕ್ಕೆ ಆಗಮಿಸಿದರು. ನಂತರ ಅಲ್ಲಿನ ಜೀನವದಿ ಕಾವೇರಿ ಕಲಾ ಗ್ಯಾಲರಿಯನ್ನು ವೀಕ್ಷಿಸಿದ ಅವರು ಸಂತಸ ವ್ಯಕ್ತಪಡಿಸಿದರು.

ನಂತರ ಅಧ್ಯಕ್ಷರ ಕಚೇರಿಗೆ ತೆರಳಿದ ಅವರು ಅಲ್ಲಿಯೇ ಕೆಲಕಾಲ ವಿರಮಿಸಿದರು. ಈ ವೇಳೆ ಸಚಿವರಾದ ಕೆ.ವೆಂಕಟೇಶ್, ಜಮೀರ್ ಅಹಮದ್, ಭೈರತಿ ಸುರೇಶ್, ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ಪೊನ್ನಣ್ಣ, ರಾಘವೇಂದ್ರ ಇಟ್ನಾಳ್ ಅವರೊಡನೆ ನಗರದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದರು.

ಈ ವೇಳೆ ವಸ್ತುಪ್ರದರ್ಶನ ಆವರಣದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಅಯೂಬ್ ಖಾನ್ ಅವರು ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದರು. ಅಧ್ಯಕ್ಷರಾದ ನಂತರ ವಸ್ತು ಪ್ರದರ್ಶನ ಆವರಣದಲ್ಲಿ ಕೈಗೊಂಡಿರುವ ಹೊಸ ಯೋಜನೆಗಳು ಹಾಗೂ ಜನಾಕರ್ಷಣೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಅವರ ಮಾತುಗಳನ್ನು ಮೌನದಿಂದಲೇ ಆಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಸ್ತು ಪ್ರದರ್ಶನ ದಸರಾದ ಪ್ರಮುಖ ಆಕರ್ಷಣೆ. ಹೀಗಾಗಿ ಜನರನ್ನು ಸೆಳೆಯಬಲ್ಲ ಕಾರ್ಯಕ್ರಮಗಳನ್ನು ರೂಪಿಸಬೇಕು. ಮೈಸೂರಿಗೆ ಬಂದವರು ವಸ್ತುಪ್ರದರ್ಶನಕ್ಕೆ ಬರುವಂತಹ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ಸೂಚನೆ ನೀಡಿದರು.

ಪುಷ್ಪಾರ್ಚನೆ
ಇದೇ ವೇಳೆ ಕರ್ನಾಟಕ ಸುಗಮ ಸಂಗೀತದ ಪಿತಾಮಹ ಗಾನಕೋಗಿಲೆ ಪಿ.ಕಾಳಿಂಗರಾವ್ ಅವರ ಜನ್ಮದಿನೋತ್ಸವದ ಅಂಗವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಕಛೇರಿಯಲ್ಲಿ ಪಿ.ಕಾಳಿಂಗರಾವ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.

ಇದೇ ಸಂಧರ್ಭದಲ್ಲಿ ಪ್ರಾಽಕಾರದ ಅಧ್ಯಕ್ಷ ಅಯೂಬ್ ಖಾನ್ ಮಾತನಾಡಿ ಸುಗಮ ಸಂಗೀತ ಕ್ಷೇತ್ರದ ಪಿತಾಮಹ ಪಿ.ಕಾಳಿಂಗರಾಯರು ಕರ್ನಾಟಕ ಏಕೀಕರಣ ಸಂಧರ್ಭದಲ್ಲಿ ಹಾಡಿದ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಕರ್ನಾಟಕದ ಅಸ್ಮಿತೆ ಶಕ್ತಿಯನ್ನ ಹೆಚ್ಚಿಸಿತು ಎಂದರು.

ಮೈಸೂರು ಅನಂತಸ್ವಾಮಿ ಸೇರಿದಂತೆ ಹಲವಾರು ಗಾಯಕರಿಗೆ ಕಾಳಿಂಗರಾಯರು ಪ್ರೇರಣೆಯಾಗಿದ್ದರು, ಸಾವಿರಾರು ಕಲಾವಿದರು ವಿಶ್ವ ಸುಗಮಸಂಗೀತ ದಿನಾಚರಣೆಯನ್ನಾಗಿಯೂ ಸಹ ಆಚರಿಸುತ್ತಿದ್ದಾರೆ. ವಸ್ತು ಪ್ರದರ್ಶನದ ಆವರಣದಲ್ಲಿ ಪಿ.ಕಾಳಿಂಗರಾಯರ ಹೆಸರಿನಲ್ಲಿ ಸಾಂಸ್ಕ ತಿಕ ವೇದಿಕೆಯಿದ್ದು, ಪ್ರತಿದಿನ ವಿವಿಧ ಕಲಾಪ್ರಕಾರಗಳ ರಾಜ್ಯದ ವಿವಿಧ ಜಿಲ್ಲೆಯ ಮತ್ತು ಸ್ಥಳೀಯ ಕಲಾವಿದರಿಗೆ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರಗೆ ಮಾಹಿತಿ ನೀಡಿದರು.

ಇದೇ ಸಂಧರ್ಭದಲ್ಲಿ ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಕಸಾಪ ಮಾಜಿ ಅಧ್ಯಕ್ಷ ವೈ.ಡಿ.ರಾಜಣ್ಣ, ಚಂದ್ರಶೇಖರ್, ಸುಗಮ ಸಂಗೀತ ಪರಿಷತ್ ಅಧ್ಯಕ್ಷ ನಾಗರಾಜ ವಿ ಭೈರಿ, ಮಾಜಿ ಪಾಲಿಕೆ ಸದಸ್ಯರಾದ ಸೈಯದ್ ಹಜರತ್, ಕೆ.ವಿ.ಮಲ್ಲೇಶ್, ರಘುರಾಜೇ ಅರಸ್, ಗಯಾಜ್ ಅಹಮದ್, ರಾಕೇಶ್, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ಕೈಸರ್ ಅಹಮದ್, ಮಹೇಂದ್ರ ಕಾಗಿನೆಲೆ, ರಂಗಸ್ವಾಮಿ ಪಾಪು, ಲತಾ ರಂಗನಾಥ್, ಜಯಲಕ್ಷ್ಮಿ, ಶಾಂತಮ್ಮ, ನಾಗೇಶ್ ಇನ್ನಿತರರು ಇದ್ದರು

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

6 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

6 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

6 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

7 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

7 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

8 hours ago