Mysore
18
clear sky

Social Media

ಭಾನುವಾರ, 18 ಜನವರಿ 2026
Light
Dark

ಇಂದು ಕುಪ್ಯಾ ಗ್ರಾಮಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ: ಎಲ್ಲೆಡೆ ರಾರಾಜಿಸುತ್ತಿರುವ ಫ್ಲೆಕ್ಸ್‌ಗಳು

ಮೈಸೂರು: ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ ದಾಖಲೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತವರೂರು ಮೈಸೂರಿಗೆ ಆಗಮಿಸುತ್ತಿದ್ದಾರೆ. ತವರು ಕ್ಷೇತ್ರದಲ್ಲಿ ನಡೆಯುವ ಹಲವು ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ.

ಇಂದು ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಲಿದ್ದಾರೆ. ಜಾತ್ರಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿವಿಧ ಕಾರ್ಯಕ್ರಮ ಉದ್ಘಾಟನೆ ಬಳಿಕ ಭಕ್ತರು ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದು, ನಂತರ ಅವರು ತಮ್ಮ ವರುಣ ಕ್ಷೇತ್ರದ ಕುಪ್ಯಾ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ಸಂಗೊಳ್ಳಿ ರಾಯಣ್ಣ ಹಾಗೂ ಬಾಬು ಜಗಜೀವನ್ ರಾಮ್ ಅವರ ಪುತ್ಥಳಿಗಳನ್ನು ಅನಾವರಣಗೊಳಿಸಲಿದ್ದಾರೆ.

ಇದೇ ವೇಳೆ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಲಿದ್ದಾರೆ. ರಸ್ತೆ, ಮೂಲಸೌಕರ್ಯ ಹಾಗೂ ಸಾರ್ವಜನಿಕ ಉಪಯೋಗಕ್ಕೆ ಸಂಬಂಧಿಸಿದ ಯೋಜನೆಗಳು ಇದರಲ್ಲಿ ಸೇರಿವೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿಯ ಆಗಮನಕ್ಕೆ ಕ್ಷೇತ್ರದ ಜನರು ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದು, ಹಬ್ಬದ ವಾತಾವರಣದಂತೆ ಸ್ವಾಗತಿಸಲು ತಯಾರಿ ನಡೆಸಲಾಗಿದೆ. ಗ್ರಾಮಗಳಿಂದ ನಗರವರೆಗೆ ಸಿಎಂ ಬರಮಾಡಿಕೊಳ್ಳಲು ಬೆಂಬಲಿಗರು ಹಾಗೂ ಕಾರ್ಯಕರ್ತರು ಫ್ಲೆಕ್ಸ್ ಹಾಕಿ ಉತ್ಸಾಹದಿಂದ ಸಜ್ಜಾಗಿದ್ದಾರೆ.

Tags:
error: Content is protected !!