Mysore
23
scattered clouds

Social Media

ಸೋಮವಾರ, 12 ಜನವರಿ 2026
Light
Dark

ಮೈಸೂರು: ಹುಟ್ಟೂರಲ್ಲಿ ಮತದಾನ ಮಾಡಿದ ಸಿಎಂ ಸಿದ್ದರಾಮಯ್ಯ!

ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ವರುಣಾ ವಿಧಾನಸಭಾ ಕ್ಷೇತ್ರದ ತಮ್ಮ ಹುಟ್ಟೂರಾದ ಸಿದ್ದರಾಮಯ್ಯನ ಹುಂಡಿಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು (ಏ.26) ಮತದಾನ ಮಾಡಿದರು.

ಎರಡನೇ ಹಂತದ ಲೋಕಸಭಾ ಕ್ಷೇತ್ರದ ಕರ್ನಾಟಕದ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಇಂದು ತಮ್ಮ ಊರಿಗೆ ತಮ್ಮ ಬೆಂಗಾವಲು ಪಡೆಯೊಂದಿಗೆ ಆಗಮಿಸಿ ಮತ ಚಲಾಯಿಸಿದರು.

ಬಳಿಕ ಜನಜಂಗುಳಿ ಮಧ್ಯೆ ಮತ ಚಲಾಯಿಸಿದ ನಂತರ ಹೊರ ಬಂದು ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ಬೆರಳುಗಳ ಮೇಲೆ ಹಾಕಲಾಗಿರುವ ಶಾಹಿ ತೋರಿಸಿದರು.

ಇಂದು (ಏ.26) ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ಮೇ.7 ರಂದು ನಡೆಯಲಿದೆ.

Tags:
error: Content is protected !!