Mysore
29
few clouds

Social Media

ಗುರುವಾರ, 29 ಜನವರಿ 2026
Light
Dark

ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗ್ತಾರೆ : ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ

CM Siddaramaiah will go to jail RTI activist Snehamayi Krishna

ಮೈಸೂರು : ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ದುರುಪಯೋಗ ಪಡಿಸಿಕೊಂಡು ಇಲ್ಲಿಯವರೆಗೆ ಕಾನೂನಿನ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿದ್ದಾರೆ. ಇವತ್ತಲ್ಲ ನಾಳೆ ಅವರು ಜೈಲಿಗೆ ಹೋಗಲೇ ಬೇಕಾದ ಸಂಧರ್ಭ ಬಂದೇ ಬರುತ್ತದೆ ಎಂದು ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣ ಸಂಬಂಧ ಈಗಾಗಲೇ ತನಿಖೆ ನಡೆಯುತ್ತಿದೆ. ತನಿಖೆಗೆ ಬೇಕಾದ ಪೂರಕ ಸಾಕ್ಷ್ಯಾಧಾರಗಳ ಒದಗಿಸಿದ್ದೇನೆ. ಸಾಕ್ಷ್ಯಾಧಾರಗಳ ನಾಶ ಮಾಡುವ ಕೆಲಸವನ್ನ ಪೋಲಿಸರಿಂದ ಮಾಡಿಸುತ್ತಿದ್ದಾರೆ. ಸಿಎಂ ತಪ್ಪಿತಸ್ಥರೆಂದು 14 ನಿವೇಶನಗಳ ಹಿಂದಿರುಗಿಸಿದಾಗಲೇ ಜನರಿಗೆ ಗೊತ್ತಾಗಿದೆ. ಕಾದು ನೋಡಿ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆ ಎಂದು ಭವಿಷ್ಯ ನುಡಿದರು.

ಲೋಕಾಯುಕ್ತ ಎಸ್‌ಪಿಯನ್ನು ವರ್ಗಾವಣೆ ಮಾಡಬೇಕು: ಮೈಸೂರು ಲೋಕಾಯುಕ್ತಾ ಎಸ್ಪಿ ಟಿ.ಜೆ ಉದೇಶ್ ಕರ್ತವ್ಯ ಲೋಪ ಎಸಗಿದ್ದಾರೆ. ಮುಡಾ ಪ್ರಕರಣದ ತನಿಖೆಯನ್ನ ಪಾರದರ್ಶಕವಾಗಿ ಮಾಡುತ್ತಿಲ್ಲ. ಸಾಕ್ಷ್ಯಾಧಾರಗಳ ನಾಶಪಡಿಸುವ ಕೆಲಸ ಮಾಡುತ್ತಿದ್ದಾರೆ.

ಸಿದ್ದರಾಮಯ್ಯರನ್ನ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಇವರೇ ಸಹಕರಿಸುತ್ತಿದ್ದಾರೆ. ಈ ಕೂಡಲೇ ಉದೇಶ್ ಅವರನ್ನ ವರ್ಗಾವಣೆ ಮಾಡಬೇಕು ಎಂದು ನಿನ್ನೆ ಕೋರ್ಟ್ ನಲ್ಲಿ ವಾದ ಮಂಡಿಸಿದ್ದೇನೆ. ವಿಚಾರಣೆಯನ್ನ ಜುಲೈ 15 ಕ್ಕೆ ಮುಂದೂಡಿದ್ದಾರೆ ಎಂದು ಮಾಹಿತಿ ನೀಡಿದರು.

Tags:
error: Content is protected !!