CM Siddaramaiah will go to jail RTI activist Snehamayi Krishna
ಮೈಸೂರು : ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ದುರುಪಯೋಗ ಪಡಿಸಿಕೊಂಡು ಇಲ್ಲಿಯವರೆಗೆ ಕಾನೂನಿನ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿದ್ದಾರೆ. ಇವತ್ತಲ್ಲ ನಾಳೆ ಅವರು ಜೈಲಿಗೆ ಹೋಗಲೇ ಬೇಕಾದ ಸಂಧರ್ಭ ಬಂದೇ ಬರುತ್ತದೆ ಎಂದು ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಭವಿಷ್ಯ ನುಡಿದಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣ ಸಂಬಂಧ ಈಗಾಗಲೇ ತನಿಖೆ ನಡೆಯುತ್ತಿದೆ. ತನಿಖೆಗೆ ಬೇಕಾದ ಪೂರಕ ಸಾಕ್ಷ್ಯಾಧಾರಗಳ ಒದಗಿಸಿದ್ದೇನೆ. ಸಾಕ್ಷ್ಯಾಧಾರಗಳ ನಾಶ ಮಾಡುವ ಕೆಲಸವನ್ನ ಪೋಲಿಸರಿಂದ ಮಾಡಿಸುತ್ತಿದ್ದಾರೆ. ಸಿಎಂ ತಪ್ಪಿತಸ್ಥರೆಂದು 14 ನಿವೇಶನಗಳ ಹಿಂದಿರುಗಿಸಿದಾಗಲೇ ಜನರಿಗೆ ಗೊತ್ತಾಗಿದೆ. ಕಾದು ನೋಡಿ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆ ಎಂದು ಭವಿಷ್ಯ ನುಡಿದರು.
ಲೋಕಾಯುಕ್ತ ಎಸ್‌ಪಿಯನ್ನು ವರ್ಗಾವಣೆ ಮಾಡಬೇಕು: ಮೈಸೂರು ಲೋಕಾಯುಕ್ತಾ ಎಸ್ಪಿ ಟಿ.ಜೆ ಉದೇಶ್ ಕರ್ತವ್ಯ ಲೋಪ ಎಸಗಿದ್ದಾರೆ. ಮುಡಾ ಪ್ರಕರಣದ ತನಿಖೆಯನ್ನ ಪಾರದರ್ಶಕವಾಗಿ ಮಾಡುತ್ತಿಲ್ಲ. ಸಾಕ್ಷ್ಯಾಧಾರಗಳ ನಾಶಪಡಿಸುವ ಕೆಲಸ ಮಾಡುತ್ತಿದ್ದಾರೆ.
ಸಿದ್ದರಾಮಯ್ಯರನ್ನ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಇವರೇ ಸಹಕರಿಸುತ್ತಿದ್ದಾರೆ. ಈ ಕೂಡಲೇ ಉದೇಶ್ ಅವರನ್ನ ವರ್ಗಾವಣೆ ಮಾಡಬೇಕು ಎಂದು ನಿನ್ನೆ ಕೋರ್ಟ್ ನಲ್ಲಿ ವಾದ ಮಂಡಿಸಿದ್ದೇನೆ. ವಿಚಾರಣೆಯನ್ನ ಜುಲೈ 15 ಕ್ಕೆ ಮುಂದೂಡಿದ್ದಾರೆ ಎಂದು ಮಾಹಿತಿ ನೀಡಿದರು.
ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…
ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…
‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…
ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…