ಮೈಸೂರು: ಅವರು ಅಧಿಕಾರಕ್ಕೆ ಬಂದರೆ ತಾನೇ ಹೆಸರು ಕಿತ್ತಾಕುವುದು ಎಂದು ನಾವು ಬಂದರೆ ಹೆಸರು ಕಿತ್ತಾಕುತ್ತೇವೆ ಎಂಬ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಸಿಎಂ, ಅವರು ಅಧಿಕಾರಕ್ಕೆ ಬಂದರೆ ತಾನೇ ಕಿತ್ತಾಕುವುದು ? ಜನರು ಆಶೀರ್ವಾದ ಮಾಡಿದ ಕಾರಣ ನಾನು ಸಿಎಂ ಆಗಿದ್ದೇನೆ. ಇವರಿಗೆ ಜನರೇ ಆಶೀರ್ವಾದ ಮಾಡುವುದಿಲ್ಲ. ಇವರು ಇನ್ನು ಎಲ್ಲಿ ಸಿಎಂ ಆಗುತ್ತಾರೆ. ಹೆಸರು ಬದಲಾವಣೆ ಮಾಡುವುದು ಭ್ರಮೆ ಎಂದು ಟಾಂಗ್ ಕೊಟ್ಟಿದ್ದಾರೆ.
ರಾಮನಗರ ಜಿಲ್ಲೆಯ ಹಸೆರು ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿ, ರಾಮನಗರ ಜಿಲ್ಲೆಯ ಎಲ್ಲಾ ಮುಖಂಡರು ಬಂದಿದ್ರು. ಮೊದಲಿನಿಂದಲೂ ಬೆಂಗಳೂರು ದಕ್ಷಿಣ ಎಂದು ಹೆಸರು ಬದಲಾಗಬೇಕು ಎಂಬುದು ಅವರ ಇಚ್ಚೆ. ಆ ಬಗ್ಗೆ ಮನವಿ ಕೊಟ್ಟಿದ್ದಾರೆ. ಕ್ಯಾಬಿನೆಟ್ ನಲ್ಲಿಟ್ಟು ತೀರ್ಮಾನ ಮಾಡುತ್ತೇವೆ ಎಂದು ಪ್ರತಿಕ್ರಿಯಿಸಿದರು.
ಇದೇ ವೇಳೆ ಮಾಜಿ ಸಚಿವ ನಾಗೇಂದ್ರ ಮನೆ ಮೇಲೆ ಇಡಿ ದಾಳಿ ವಿಚಾರಕ್ಕೆ ಮಾತನಾಡಿ, ಇಡಿ ಅವರ ಕೆಲಸವನ್ನ ಅವರು ಮಾಡುತ್ತಾರೆ. ಇದರ ಬಗ್ಗೆ ನಾನು ಹೆಚ್ಚು ಹೇಳುವುದಿಲ್ಲ. ದಾಳಿ ಮಾಡಲಿ ನಾವು ಅದರ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ ಎಂದು ಹೇಳಿದರು.