ಮೈಸೂರು: ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಂದ ಪ್ರಾಷಿಕ್ಯೂಷನ್ ಭೀತಿ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ಈ ಎಲ್ಲಾ ವಿಚಾರಗಳನ್ನು ಪಕ್ಕಕ್ಕಿಟ್ಟು ಕೆಲಕಾಲ ಮೈಸೂರಿನಲ್ಲಿ ಜಾಲಿ ಮೂಡ್‌ಗೆ ತೆರಳಿದ್ದಾರೆ.
ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ಸಿದ್ದರಾಮಯ್ಯ ಅವರ ನೂತನ ಮನೆ ನಿರ್ಮಾಣ ಕೆಲಸ ಕಾಮಗಾರಿಗಳನ್ನು ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ ಎಸ್ಕಾರ್ಟ್ ಬಿಟ್ಟು ಸ್ವತಂತ್ರವಾಗಿ ಮೈಸೂರಿನೆಲ್ಲೆಡೆ ಸುತ್ತಾಡಿದ್ದಾರೆ.
ಸಿದ್ದರಾಮಯ್ಯ ಅವರ ಖಾಸಗಿ ವಾಹನಕ್ಕೆ ಮಾಜಿ ಶಾಸಕ ಎಚ್.ಪಿ ಮಂಜುನಾಥ್ ಡ್ರೈವರ್ ಆಗಿ ಜೊತೆಯಲ್ಲಿದ್ದರು.
ಸಾರ್ವಜನಿಕ ಸ್ಥಳದಲ್ಲಿ ಕಾರ್ ನಿಲ್ಲಿಸಿ ಸ್ಥಳೀಯ ಅಂಗಡಿಯಲ್ಲಿ ಟೀ ಸವಿದರು. ಬಳಿಕ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು ಬಂದ ಸಾರ್ವಜನಿಕರೊಂದಿಗೆ ನಗುನಗುತ್ತಲೇ ಮಾತನಾಡಿದ ಸಿಎಂ ಜನರ ಕಷ್ಟಗಳನ್ನು ಕೇಳಿದರು.
ಇತ್ತ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಡಾ ಹಗರಣವನ್ನು ಮುಂದಿಟ್ಟು ಮೈಸೂರು ಚಲೋ ಯಾತ್ರೆ ಮಾಡುತ್ತಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಇದಕ್ಕೆ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂಬದು ಗಮನಾರ್ಹ.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…