ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ನಗರಕ್ಕೆ ಆಗಮಿಸಲಿದ್ದಾರೆ.
ಬೆಳಿಗ್ಗೆ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಹೊರಡುವ ಸಿಎಂ, ಮೈಸೂರು ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಜೆ.ಪಿ.ನಗರದಲ್ಲಿ ಪಕ್ಷದ ನಾಯಕರೊಬ್ಬರ ಮನೆಗೆ ಭೇಟಿ,ನಂತರ, ಖಾಸಗಿ ಕಲ್ಯಾಣಮಂಟಪದಲ್ಲಿ ಮದುವೆ ವಿವಾಹದಲ್ಲಿ ಭಾಗಿಯಾಗಲಿದ್ದಾರೆ. ಬೆಳಿಗ್ಗೆ ೧೦.೩೦ಕ್ಕೆ, ಸಿದ್ಧಾರ್ಥನಗರದಲ್ಲಿರುವ ಜಿಲ್ಲಾಡಳಿತ ಭವನ ಎದುರು ನಿರ್ಮಿಸಿರುವ ಡಿ.ದೇವರಾಜ ಅರಸು ಪ್ರತಿಮೆ ಅನಾವರಣ ಮಾಡುವರು.
ಇದನ್ನು ಓದಿ: ಗ್ರೇಟರ್ ಬೆಂಗಳೂರು ಚುನಾವಣೆಗೆ ತಯಾರಿ ; ಉಸ್ತುವಾರಿ ಸಮಿತಿ ರಚಿಸಿದ ಎಚ್‌ಡಿಕೆ
ನಂತರ ನಗರಪಾಲಿಕೆ ವಲಯ ಕಚೇರಿ ಮೂರರಲ್ಲಿ ಗ್ರೇಟರ್ ಮೈಸೂರು ರಚನೆ ಕುರಿತು ಸಭೆ ನಡೆಸಲಿದ್ದಾರೆ. ನಂತರ,ಮಧ್ಯಾಹ್ನ ಮದುವೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ ೪ಕ್ಕೆ, ಮುಕ್ತ ವಿವಿ ಘಟಿಕೋತ್ಸವ ಭವನದಲ್ಲಿ ನಡೆಯಲಿರುವ ಚಲನಚಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಬಳಿಕ, ವಿಶ್ರಾಂತಿ ಪಡೆಯಲಿರುವ ಸಿಎಂ,ಸಂಜೆ ಹೋಟೆಲ್ ಸದರನ್ ಸ್ಟಾರ್‌ನಲ್ಲಿ ನಡೆಯಲಿರುವಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ,ತಮ್ಮ ನಿವಾಸದಲ್ಲಿ ವಾಸ್ತವ್ಯ ಹೂಡವರು. ಮರುದಿನ ಬೆಂಗಳೂರಿಗೆ ತೆರಳುವರು ಎಂದು ತಿಳಿಸಲಾಗಿದೆ.
ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.ಅಶೋಕ್ ಹೇಳಲಿ…
ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…
ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್ ಆಪರೇಷನ್ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…
ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…
ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…