ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 50-50 ನಿವೇಶನ ಹಂಚಿಕೆಯಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರನ್ನು ಮೈಸೂರು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಎ1, ಪತ್ನಿ ಪಾರ್ವತಿ ಸಿದ್ದರಾಮಯ್ಯ ಎ2, ಮಲ್ಲಿಕಾರ್ಜುನಸ್ವಾಮಿ ಎ3, ಹಾಗೂ ದೇವರಾಜು ಎ4 ಆರೋಪಿಯನ್ನಾಗಿಸಿ ಮೈಸೂರಿನ ಲೋಕಾಯುಕ್ತ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಹೀಗಾಗಿ, ಮೈಸೂರು ಲೋಕಾಯುಕ್ತ ಅಧಿಕಾರಿಗಳು ಇಂದು(ಅಕ್ಟೋಬರ್ 25) ಬೆಳಿಗ್ಗೆ 10 ಗಂಟೆಗೆ ಕಚೇರಿಗೆ ಕರೆಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಲೋಕಾಯುಕ್ತ ಎಸ್.ಪಿ. ಟಿ.ಜೆ.ಉದೇಶ್ ಪಾರ್ವತಿ ಅವರನ್ನು ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿ ಮಹತ್ವದ ಹೇಳಿಕೆಗಳನ್ನು ಪಡೆದುಕೊಂಡು ಗೌಪ್ಯವಾಗಿ ಮಾಹಿತಿ ಸಂಗ್ರಹಿಸಿದ್ದಾರೆ. ಈ ಹಿಂದೆ ಪಾರ್ವತಿ ಅವರು ಮುಡಾದ 50:50 ಅನುಪಾತದ ಬದಲಿ ನಿವೇಶನಗಳನ್ನು ಹಿಂತಿರುಗಿಸುವ ಸಂದರ್ಭದಲ್ಲಿಯೂ ಸಹ ಗೌಪ್ಯತೆಯನ್ನು ಕಾಪಾಡಲಾಗಿತ್ತು.
ಈಗಾಗಲೇ ಮುಡಾ ಪ್ರಕರಣದಲ್ಲಿ ಎ3 ಆರೋಪಿ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಎ4 ಆರೋಪಿ ದೇವರಾಜು ಅವರನ್ನು ವಿಚಾರಣೆ ನಡೆಸಿ ಮಾಹಿತಿಯನ್ನು ಪಡೆದುಕೊಂಡಿದ್ದರು. ಬಳಿಕ, ಪಾರ್ವತಿ ಸಿದ್ದರಾಮಯ್ಯ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು.
ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ…
ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನ ರಾಜ್ಯಮಟ್ಟದ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜ.27…
ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…
ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…
ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…