ಮೈಸೂರು

ಸಿಎಂ ಪತ್ನಿ `ಪಾರ್ವತಿ’ ಲೋಕಾಯುಕ್ತ ವಿಚಾರಣೆಗೆ ಹಾಜರು; ಗೌಪ್ತವಾಗಿ ವಿಚಾರಣೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 50-50 ನಿವೇಶನ ಹಂಚಿಕೆಯಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರನ್ನು ಮೈಸೂರು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಎ1, ಪತ್ನಿ ಪಾರ್ವತಿ ಸಿದ್ದರಾಮಯ್ಯ ಎ2, ಮಲ್ಲಿಕಾರ್ಜುನಸ್ವಾಮಿ ಎ3, ಹಾಗೂ ದೇವರಾಜು ಎ4 ಆರೋಪಿಯನ್ನಾಗಿಸಿ ಮೈಸೂರಿನ ಲೋಕಾಯುಕ್ತ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಹೀಗಾಗಿ, ಮೈಸೂರು ಲೋಕಾಯುಕ್ತ ಅಧಿಕಾರಿಗಳು ಇಂದು(ಅಕ್ಟೋಬರ್‌ 25) ಬೆಳಿಗ್ಗೆ 10 ಗಂಟೆಗೆ ಕಚೇರಿಗೆ ಕರೆಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಲೋಕಾಯುಕ್ತ ಎಸ್‌.ಪಿ. ಟಿ.ಜೆ.ಉದೇಶ್‌ ಪಾರ್ವತಿ ಅವರನ್ನು ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿ ಮಹತ್ವದ ಹೇಳಿಕೆಗಳನ್ನು ಪಡೆದುಕೊಂಡು ಗೌಪ್ಯವಾಗಿ ಮಾಹಿತಿ ಸಂಗ್ರಹಿಸಿದ್ದಾರೆ. ಈ ಹಿಂದೆ ಪಾರ್ವತಿ ಅವರು ಮುಡಾದ 50:50 ಅನುಪಾತದ ಬದಲಿ ನಿವೇಶನಗಳನ್ನು ಹಿಂತಿರುಗಿಸುವ ಸಂದರ್ಭದಲ್ಲಿಯೂ ಸಹ ಗೌಪ್ಯತೆಯನ್ನು ಕಾಪಾಡಲಾಗಿತ್ತು.

ಈಗಾಗಲೇ ಮುಡಾ ಪ್ರಕರಣದಲ್ಲಿ ಎ3 ಆರೋಪಿ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಎ4 ಆರೋಪಿ ದೇವರಾಜು ಅವರನ್ನು ವಿಚಾರಣೆ ನಡೆಸಿ ಮಾಹಿತಿಯನ್ನು ಪಡೆದುಕೊಂಡಿದ್ದರು. ಬಳಿಕ, ಪಾರ್ವತಿ ಸಿದ್ದರಾಮಯ್ಯ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿತ್ತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾಧಕರಿಗೆ ಸಂದ ಗೌರವ

ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…

3 hours ago

ಓದುಗರ ಪತ್ರ: ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…

3 hours ago

ಓದುಗರ ಪತ್ರ: ಡಿಜಿಟಲ್ ಲಗೇಜ್ ಲಾಕರ್ ಎಲ್ಲೆಡೆ ವಿಸ್ತರಿಸಲಿ

ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…

3 hours ago

ಮಗನ ನೆನಪಲ್ಲಿ ಪೋಷಕರ ಮಾದರಿ ಕಾರ್ಯ

ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…

3 hours ago

ಭತ್ತದ ಬೆಳೆಗೆ ಎಲೆ ಸುರುಳಿ-ಬೆಂಕಿ ರೋಗದ ಬಾಧೆ

ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ  ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…

3 hours ago

ಸಕ್ಕರೆ ನಾಡಿನಲ್ಲಿ ಬರದಿಂದ ಕಂಗಾಲಾದ ರೈತರು

ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯಲ್ಲಿ ೪೮,೫೯೧ ಹೆ. ಬೆಳೆ ಹಾನಿ ೫೪.೫೩ ಕೋಟಿ ರೂ. ನಷ್ಟದ ಅಂದಾಜು ಮಂಡ್ಯ: ಜಿಲ್ಲೆಯಲ್ಲಿ ಕಳೆದ…

3 hours ago