ಮೈಸೂರು: ಮೈಸೂರು ಜಿಲ್ಲೆ ಸೇರಿದಂತೆ ಲಕ್ಷಾಂತರ ಜನರ ಜೀವನಾಡಿಯಾಗಿರುವ ಕಬಿನಿ ಜಲಾಶಯ ಮೈದುಂಬಿಕೊಂಡು ಕಂಗೊಳಿಸುತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಲಾಶಯಕ್ಕೆ ಬಾಗಿನ ಸಮರ್ಪಿಸುತ್ತಿದ್ದಾರೆ. ಮಂತ್ರಿ ಮಹೋದಯರು ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿಲಿದ್ದಾರೆ.
ಕರ್ನಾಟಕ ಸರ್ಕಾರ, ಜಲಸಂಪನ್ಮೂಲ ಇಲಾಖೆ ಹಾಗೂ ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಜುಲೈ 29 ರಂದು ಮಧ್ಯಾಹ್ನ 3 ಗಂಟೆಗೆ ಎಚ್.ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿ “ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿಗಳು ಮತ್ತು ಜಲಸಂಪನ್ಮೂಲ ಸಚಿವರಾದ ಡಿ ಕೆ ಶಿವಕುಮಾರ್, ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ, ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವ ಕೆ.ವೆಂಕಟೇಶ್, ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು ಅವರು ಘನ ಉಪಸ್ಥಿತಿ ಇರಲಿದ್ದಾರೆ.
ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷರು ಹಾಗೂ ಎಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ್ ಕುಮಾರ್.ಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷ ಎ.ಬಿ ರಮೇಶ್ ಬಂಡಿ ಸಿದ್ದೇಗೌಡ, ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ನ ಅಧ್ಯಕ್ಷ ಸಿ.ಪುಟ್ಟರಂಗ ಶೆಟ್ಟಿ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ.ಪುಷ್ಪ ಅಮರನಾಥ್, ಸಂಸದ ಸುನಿಲ್ ಬೋಸ್, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಶಾಸಕರಾದ ತನ್ವೀರ್ ಸೇಠ್, ಜಿ.ಟಿ ದೇವೇಗೌಡ, ರವಿಶಂಕರ್.ಡಿ, ಟಿ.ಎಸ್ ಶ್ರೀವತ್ಸ, ಜಿ.ಡಿ ಹರೀಶ್ ಗೌಡ, ದರ್ಶನ್ ದೃವನಾರಾಯಣ್, ಕೆ.ಹರೀಶ್ ಗೌಡ, ಎ.ಆರ್ ಕೃಷ್ಣಮೂರ್ತಿ, ಎಂ.ಆರ್ ಮಂಜುನಾಥ್, ಗಣೇಶ್ ಪ್ರಸಾದ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಎಚ್.ವಿಶ್ವನಾಥ್, ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮಧು ಜಿ.ಮಾದೇಗೌಡ, ಯತಿಂದ್ರ.ಎಸ್ ಮತ್ತು ವಿವೇಕಾನಂದ.ಎಸ್, ಅವರು ಉಪಸ್ಥಿತರಿರಲಿದ್ದಾರೆ.