ಮೈಸೂರು: ಲೋಕಸಭಾ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ಪ್ರತಿಭಟನಕಾರರು ತರಾಟೆಗೆ ತೆಗೆದುಕೊಂಡ ಘಟನೆ ಸಿಎಂ ತವರು ಕ್ಷೇತ್ರದಲ್ಲಿ ನಡೆದಿದೆ.
ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ನಂಜನಗೂಡು ತಾಲ್ಲೂಕಿನ ಮಲ್ಲುಪುರ ಗ್ರಾಮದಲ್ಲಿ ಸುನಿಲ್ ಬೋಸ್ ಪರ ಚುನಾವಣಾ ಪ್ರಚಾರ ಕೈಗೊಂಡಿದ್ದ ವಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಪ್ರಚಾರ ಮುಗಿಸಿ ಅದೇ ಗ್ರಾಮದಲ್ಲಿರುವ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯ ಮುಂಭಾಗ ಕಳೆದ ಎರಡು ತಿಂಗಳುಗಳಿಂದ ತಮ್ಮ ಬೇಡಿಕೆ ಈಡೇರಿಕೆಗಾಗಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಪ್ರತಿಭಟನಾಕಾರರನ್ನು ಭೇಟಿ ವಾಡಿದ ಸಂದರ್ಭ ಪ್ರತಿಭಟನಾಕಾರರು ಅವರನ್ನು ತರಾಟೆಗೆ ತೆಗೆದುಕೊಂಡರು.
ಚುನಾವಣೆಗೋಸ್ಕರ ಇಲ್ಲಿಗೆ ಬಂದಿದ್ದೀರಿ ಇಲ್ಲದಿದ್ದರೆ ನೀವು ಯಾವುದೇ ಕಾರಣಕ್ಕೂ ಬರುತ್ತಿರಲಿಲ್ಲ ಎಂದು ಕಿಡಿಕಾರಿದರು.