ಮೈಸೂರು : ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನೆ ಕೈಗೊಳ್ಳಲು ಪ್ರವೇಶಾತಿಗೆ ಅವಕಾಶ ನೀಡುವಂತೆ ಆಗ್ರಹಿಸಿ ಮುಖ್ಯಮಂತ್ರಿಗೆ ಮನವಿ ನೀಡಲು ಸಂಶೋಧನಾ ಆಕಾಂಕ್ಷಿಗಳು ಕ್ರಾಫರ್ಡ್ ಭವನದಿಂದ ಶನಿವಾರ ಸಂಜೆ ಮುಖ್ಯಮಂತ್ರಿ ಅವರ ಮನೆಗೆ ಪ್ರತಿಭಟನಾ ಮೆರವಣಿಗೆ ಹೊರಟರು. ಅವರನ್ನು ಪೊಲೀಸರು ಗೇಟ್ ಬಳಿ ತಡೆದರು.
ಕಳೆದ ಮೂರು ದಿನಗಳಿಂದ ವಿ.ವಿಯ ಕ್ರಾಫರ್ಡ್ ಭವನದ ಮುಂದೆ ಅಹೋರಾತ್ರಿ ಧರಣಿ ನಡೆಸುತ್ತಿದ್ದೇವೆ. ಶನಿವಾರ ಸಂಜೆ ಮುಖ್ಯಮಂತ್ರಿ ಅವರ ಮನೆಗೆ ಪ್ರತಿಭಟನಾ ಮೆರವಣಿಗೆ ಹೊರಡಲು ತೀರ್ಮಾನಿಸಿದಾಗ ಅದಕ್ಕೊಪ್ಪದ ಪೊಲೀಸರು ಮೆರವಣಿಗೆ ಮೊಟಕುಗೊಳಿಸಲು ತಿಳಿಸಿ ಮುಖಂಡರನ್ನಷ್ಟೇ ಭೇಟಿ ಮಾಡಲು ಹೇಳಿದರು. ಆದರೆ, “ಕಾರ್ಯದೊತ್ತಡದಿಂದ ಮುಖ್ಯಮಂತ್ರಿಗಳ ಭೇಟಿಯನ್ನು ಭಾನುವಾರಕ್ಕೆ ಮುಂದೂಡಲಾಗಿದೆ’ ಎಂದು ಪ್ರತಿಭಟನಾಕರಾರು ತಿಳಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.
“ಮೈಸೂರು ವಿ.ವಿಯು ನಡೆಸುವ ಪಿ.ಎಚ್‌ಡಿ ಪ್ರವೇಶಾತಿ ಪರೀಕ್ಷೆಯಲ್ಲಿ ಮತ್ತು ಜೆಆರ್‌ಎಫ್, ಎನ್‌ಇಟಿ, ಕೆ&ಸೆಟ್ ಪರೀಕ್ಷೆಗಳಲ್ಲಿ ಉತೀರ್ಣಗೊಂಡು ಗರಿಷ್ಠ ಅಂಕ ಹೊಂದಿ ಸಂಶೋಧನೆ ಕಾರ್ಯ ಕೈಗೊಳ್ಳಲು ಅರ್ಹತೆ ಪಡೆದಿರುವ ಸಂಶೋಧನಾ ಆಕಾಂಕ್ಷಿಗಳಿಗೆ ಸಂಶೋಧನೆ ನಡೆಸಲು ಪ್ರವೇಶಾತಿ ಕಲ್ಪಿಸುವಂತೆ ಹತ್ತಾರು ಬಾರಿ ಕುಲಪತಿ ಹಾಗೂ ಪರೀಕ್ಷಾಂಗ ಕುಲಸಚಿವರಿಗೆ ಮನವಿ ಸಲ್ಲಿಸಿದ್ದೇವೆ. ಆದರೆ ನಮ್ಮ ಮನವಿಗೆ ವಿಶ್ವವಿದ್ಯಾಲಯದಿಂದ ಸ್ಪಂದಿಸಿಲ್ಲ’ ಎಂದು ದೂರಿದರು.
“ಮೇ ತಿಂಗಳಲ್ಲಿ ಇದೇ ವಿಚಾರವಾಗಿ ನಾಲ್ಕು ದಿನ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದೆವು. ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ಮೇ ೨೩ರಂದು ಬೇಡಿಕೆ ಈಡೇರಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದಿದ್ದೆವು. ಉನ್ನತ ಶಿಕ್ಷಣ ಸಚಿವರ ಗಮನಕ್ಕೂ ತರಲಾಗಿತ್ತು. ಆದರೆ, ಅವರ ಮೌಖಿಕ ಆದೇಶದ ಬಳಿಕವೂ ವಿಶ್ವವಿದ್ಯಾಲಯ ನ್ಯಾಯ ದೊರಕಿಸಿ ಕೊಟ್ಟಿಲ್ಲ’ ಎಂದು ಆರೋಪಿಸಿದರು.
“ಪಿಎಚ್.ಡಿ ಸಂಶೋಧನೆಗೆ ಅರ್ಹತೆಯುಳ್ಳ ಪರಿಶಿಷ್ಟ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಾದ ನಮಗೆ ಪಿ.ಎಚ್‌ಡಿ ಪ್ರವೇಶಾತಿ ಕಲ್ಪಿಸಲು ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆ ನೀಡುವ ಮೂಲಕ ಅತಂತ್ರ ಸ್ಥಿತಿಯಲ್ಲಿರುವ ನಮಗೆ ನ್ಯಾಯ ಒದಗಿಸಿಕೊಡಬೇಕು’ ಎಂದು ಆಗ್ರಹಿಸಿದರು.
ರವಿಕುಮಾರ್, ಮೌನದೊರೆ, ನವೀನ್, ರೋಜಾ, ಕರುಣ್, ಪ್ರಸನ್ನ, ನವೀನ್ ಕುಮಾರ್, ಯಶಸ್ವಿನಿ ಸೇರಿದಂತೆ ಸಂಶೋಧನಾ ಆಕಾಂಕ್ಷಿಗಳು ಭಾಗವಹಿಸಿದ್ದರು.
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೇರಂಬಾಡಿ ಗ್ರಾಮದ ಜಮೀನೊಂದರಲ್ಲಿ ಉಪಟಳ ನೀಡುತಿದ್ದ ಹುಲಿಯನ್ನು ಅರಣ್ಯ ಇಲಾಖೆ…