ಮೈಸೂರು

ಸಿಎಂ ಭೇಟಿ : ಪಿಎಚ್‌.ಡಿ ಸಂಶೋಧನಾ ಆಕಾಂಕ್ಷಿಗಳನ್ನ ತಡೆದ ಪೊಲೀಸರು

ಮೈಸೂರು : ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನೆ ಕೈಗೊಳ್ಳಲು ಪ್ರವೇಶಾತಿಗೆ ಅವಕಾಶ ನೀಡುವಂತೆ ಆಗ್ರಹಿಸಿ ಮುಖ್ಯಮಂತ್ರಿಗೆ ಮನವಿ ನೀಡಲು ಸಂಶೋಧನಾ ಆಕಾಂಕ್ಷಿಗಳು ಕ್ರಾಫರ್ಡ್ ಭವನದಿಂದ ಶನಿವಾರ ಸಂಜೆ ಮುಖ್ಯಮಂತ್ರಿ ಅವರ ಮನೆಗೆ ಪ್ರತಿಭಟನಾ ಮೆರವಣಿಗೆ ಹೊರಟರು. ಅವರನ್ನು ಪೊಲೀಸರು ಗೇಟ್ ಬಳಿ ತಡೆದರು.

ಕಳೆದ ಮೂರು ದಿನಗಳಿಂದ ವಿ.ವಿಯ ಕ್ರಾಫರ್ಡ್ ಭವನದ ಮುಂದೆ ಅಹೋರಾತ್ರಿ ಧರಣಿ ನಡೆಸುತ್ತಿದ್ದೇವೆ. ಶನಿವಾರ  ಸಂಜೆ ಮುಖ್ಯಮಂತ್ರಿ ಅವರ ಮನೆಗೆ ಪ್ರತಿಭಟನಾ ಮೆರವಣಿಗೆ ಹೊರಡಲು ತೀರ್ಮಾನಿಸಿದಾಗ ಅದಕ್ಕೊಪ್ಪದ ಪೊಲೀಸರು  ಮೆರವಣಿಗೆ ಮೊಟಕುಗೊಳಿಸಲು ತಿಳಿಸಿ ಮುಖಂಡರನ್ನಷ್ಟೇ ಭೇಟಿ ಮಾಡಲು ಹೇಳಿದರು. ಆದರೆ, “ಕಾರ್ಯದೊತ್ತಡದಿಂದ ಮುಖ್ಯಮಂತ್ರಿಗಳ ಭೇಟಿಯನ್ನು ಭಾನುವಾರಕ್ಕೆ ಮುಂದೂಡಲಾಗಿದೆ’ ಎಂದು ಪ್ರತಿಭಟನಾಕರಾರು ತಿಳಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

“ಮೈಸೂರು ವಿ.ವಿಯು ನಡೆಸುವ ಪಿ.ಎಚ್‌ಡಿ ಪ್ರವೇಶಾತಿ ಪರೀಕ್ಷೆಯಲ್ಲಿ ಮತ್ತು ಜೆಆರ್‌ಎಫ್, ಎನ್‌ಇಟಿ, ಕೆ&ಸೆಟ್ ಪರೀಕ್ಷೆಗಳಲ್ಲಿ ಉತೀರ್ಣಗೊಂಡು ಗರಿಷ್ಠ ಅಂಕ ಹೊಂದಿ ಸಂಶೋಧನೆ ಕಾರ್ಯ ಕೈಗೊಳ್ಳಲು ಅರ್ಹತೆ ಪಡೆದಿರುವ ಸಂಶೋಧನಾ ಆಕಾಂಕ್ಷಿಗಳಿಗೆ ಸಂಶೋಧನೆ ನಡೆಸಲು ಪ್ರವೇಶಾತಿ ಕಲ್ಪಿಸುವಂತೆ ಹತ್ತಾರು ಬಾರಿ ಕುಲಪತಿ ಹಾಗೂ ಪರೀಕ್ಷಾಂಗ ಕುಲಸಚಿವರಿಗೆ ಮನವಿ ಸಲ್ಲಿಸಿದ್ದೇವೆ. ಆದರೆ ನಮ್ಮ ಮನವಿಗೆ ವಿಶ್ವವಿದ್ಯಾಲಯದಿಂದ ಸ್ಪಂದಿಸಿಲ್ಲ’ ಎಂದು ದೂರಿದರು.

“ಮೇ ತಿಂಗಳಲ್ಲಿ ಇದೇ ವಿಚಾರವಾಗಿ ನಾಲ್ಕು ದಿನ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದೆವು. ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ಮೇ ೨೩ರಂದು ಬೇಡಿಕೆ ಈಡೇರಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದಿದ್ದೆವು. ಉನ್ನತ ಶಿಕ್ಷಣ ಸಚಿವರ ಗಮನಕ್ಕೂ ತರಲಾಗಿತ್ತು. ಆದರೆ, ಅವರ ಮೌಖಿಕ ಆದೇಶದ ಬಳಿಕವೂ ವಿಶ್ವವಿದ್ಯಾಲಯ ನ್ಯಾಯ ದೊರಕಿಸಿ ಕೊಟ್ಟಿಲ್ಲ’ ಎಂದು ಆರೋಪಿಸಿದರು.

“ಪಿಎಚ್.ಡಿ ಸಂಶೋಧನೆಗೆ ಅರ್ಹತೆಯುಳ್ಳ ಪರಿಶಿಷ್ಟ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಾದ ನಮಗೆ ಪಿ.ಎಚ್‌ಡಿ ಪ್ರವೇಶಾತಿ ಕಲ್ಪಿಸಲು ವಿಶ್ವವಿದ್ಯಾಲಯದ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆ ನೀಡುವ ಮೂಲಕ ಅತಂತ್ರ ಸ್ಥಿತಿಯಲ್ಲಿರುವ ನಮಗೆ ನ್ಯಾಯ ಒದಗಿಸಿಕೊಡಬೇಕು’ ಎಂದು ಆಗ್ರಹಿಸಿದರು.

ರವಿಕುಮಾರ್, ಮೌನದೊರೆ, ನವೀನ್, ರೋಜಾ, ಕರುಣ್, ಪ್ರಸನ್ನ, ನವೀನ್ ಕುಮಾರ್, ಯಶಸ್ವಿನಿ ಸೇರಿದಂತೆ ಸಂಶೋಧನಾ ಆಕಾಂಕ್ಷಿಗಳು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

10 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

10 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

16 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

16 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

16 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

16 hours ago