ಮೈಸೂರು: ಜ್ಞಾನಬುತ್ತಿ ಸಂಸ್ಥೆ ವತಿಯಿಂದ ಎಸ್‌ಎಸ್‌ಸಿ ಮತ್ತು ಐಬಿಪಿಎಸ್ ಅವರು ನಡೆಸಲಿರುವ ಬ್ಯಾಂಕಿಂಗ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ನೀಡಲು ನಿರ್ಧರಿಸಲಾಗಿದೆ.
ಆಸಕ್ತರು ಆಗಸ್ಟ್ 17 ರೊಳಗೆ ಪ್ರತಿದಿನ ಸಂಜೆ 5:30ರಿಂದ 7:30ರೊಳಗಾಗಿ ಮೈಸೂರಿನ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಆವರಣದಲ್ಲಿರುವ ಜ್ಞಾನಬುತ್ತಿ ಸಂಸ್ಥೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕೆಂದು ಸಂಸ್ಥೆಯ ಕಾರ್ಯದರ್ಶಿ ಹೆಚ್.ಬಾಲಕೃಷ್ಣ(9448117455) ಅವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ಹೆಚ್ಚಿನ ವಿವರಗಳಿಗಾಗಿ ಸಂಯೋಕರಾದ ಸಿ.ಕೆ ಕಿರಣ್‌ಕೌಶಿಕ್(9972830857) ಕೆ.ವೈ ನಾಗೇಂದ್ರ(8296788251) ಅವರನ್ನು ಸಂಪರ್ಕಿಸಬಹುದಾಗಿದೆ.