ಮೈಸೂರು

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಈ ನಡುವೆ ಪ್ರತಿಭಟನಾನಿರತ ಜೆನ್‌ಜೀಗಳು ರ‍್ಯಾಲಿ, ಸಮಾವೇಶಗಳಲ್ಲಿ ಪೊಲೀಸರ ಕ್ರಮ ತಡೆಯಲು ಮಾಡಿದ ತಂತ್ರಗಳ ವಿಡಿಯೋಗಳು ಸಾಕಷ್ಟು ವೈರಲ್‌ ಆಗಿವೆ.

ಮುಂಬೈನಲ್ಲಿ ಯುವತಿಯೊಬ್ಬಕೆ ಕೈ ಅಡ್ಡ ಹಿಡಿದು ಪೊಲೀಸ್‌ ವಾಹನ ತಡೆದು ನಿಲ್ಲಿಸುವುದು, ಇನ್ನೊಂದೆಡೆ ಪ್ರತಿಭಟನಾ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಪೊಲೀಸ್‌ ವಾಹನದ ಬಾಗಿಲು ತೆಗೆದು ವಶಕ್ಕೆ ಪಡೆದವರೆಲ್ಲರನ್ನೂ ಬಿಡುಗಡೆಗೊಳಿಸಿ ಓಡಿಹೋಗುವುದು, ಮತ್ತೊಂದೆಡೆ ಜಲ ಫಿರಂಗಿಯನ್ನೇ ರೈನ್‌ ಡ್ಯಾನ್ಸ್‌ ಮಾಡಿಕೊಂಡಿದ್ದು, ಬ್ಯಾರಿಕೇಡ್‌ ಹತ್ತಿ ರೈಲಾಟ, ಅಡ್ಡಕಟ್ಟಿದ್ದ ಅಗ್ಗವನ್ನೇ ಹಿಡಿದು ಟಗ್ಗಾಫರ್‌ ಆಡಿದ್ದು ಹೀಗೆ ಹಲವು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ. ಈ ರೀತಿಯೂ ಚಳುವಳಿ ಮಾಡಬಹುದು ಎಂದು ಗೊತ್ತೇ ಇರಲಿಲ್ಲ ಎಂದು ಹಲವು ನೆಟ್ಟಿಗರು ಅಚ್ಚರಿಪಟ್ಟು ಶೇರ್‌ ಮಾಡುತ್ತಿದ್ದರೆ, ಇನ್ನೂ ಕೆಲವರು ಪೊಲೀಸರ ಪರಿಸ್ಥಿತಿ ಕಂಡು ಮರುಗಿದ್ದಾರೆ.

ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಪೊಲೀಸ್‌ ವಾಹನಕ್ಕೆ ಅಡ್ಡ ನಿಂತು 27 ವರ್ಷದ ಯುವತಿ ರಿಯಾ ಅಹಿರ್ ತಡೆದರು. ರಿಯಾ ಅವರ ದಿಟ್ಟ ಪ್ರತಿರೋಧಕ್ಕೆ ಮಣಿದ ಪೊಲೀಸರು ಅಂತಿಮವಾಗಿ ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಬೇಕಾಯಿತು.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

10 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

11 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

13 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

14 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago