Mysore
25
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಮೈಸೂರಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಯಲ್ಲಿ ಒಡಕು!

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಗೆಲ್ಲಲು ಮೈತ್ರಿಯ ನಾಯಕರು ಸಮನ್ವಯಕ್ಕೆ ಸಭೆ ನಡೆಸಿದ್ದರೂ ಕ್ಷೇತ್ರದ ಮೈತ್ರಿಯಲ್ಲಿ ಒಡಕು ಉಂಟಾದಂತೆ ಕಾಣುತ್ತಿದೆ.

ಹೌದು.. ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಪರವಾಗಿ ಪ್ರಚಾರದಲ್ಲಿ ಜೆಡಿಎಸ್‌ ನಾಯಕರ ಗೈರಾಗುತ್ತಿರುವುದು ಮೈತ್ರಿಯ ಒಡಕಿಗೆ ಕಾರಣವಾಗಿದೆ ಎನ್ನಲಾಗುತ್ತಿದೆ. ಯದುವೀರ್‌ ನಡೆಸುತ್ತಿರುವ ರೋಡ್‌ ಶೋ, ಕಾರ್ನರ್‌ ಸಭೆ, ಸಂವಾದ ಹಾಗೂ ಸಭೆಗಳಲ್ಲಿ ‌ಜೆಡಿಎಸ್‌ನ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರಷ್ಟೇ ಪಾಲ್ಗೊಳ್ಳುತ್ತಿದ್ದು, ನಾಯಕರು ಬಾರದಿರುವುದು ಬಿಜೆಪಿ ಮುಖಂಡರ ಅಸಮಾಧಾನಕ್ಕೆ ಕಾರಣವಾಗಿದೆ.

ಜೆಡಿಎಸ್‌ನವರಿಂದ ಅಷ್ಟೇನೂ ಸಹಕಾರ ದೊರೆಯುತ್ತಿಲ್ಲ
ಮಾರ್ಚ್‌ 27ರಂದು ನಗರದಲ್ಲಿ ನಡೆದಿದ್ದ ಬಿಜೆಪಿ–ಜೆಡಿಎಸ್‌ ಸಮನ್ವಯ ಸಭೆಯಲ್ಲಿ ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಈ ಭಾಗದ ಜೆಡಿಎಸ್ ನಾಯಕರು ಬಿಜೆಪಿ ನಾಯರೊಂದಿಗೆ ವೇದಿಕೆ ಹಂಚಿಕೊಂಡಿದ್ದರು. ಜಿ.ಟಿ.ದೇವೇಗೌಡರು ಒಮ್ಮೆಯಷ್ಟೆ ಪ್ರಚಾರ ಮಾಡಿದ್ದಾರೆ. ಸಾ.ರಾ. ಮಹೇಶ್ ಸಮನ್ವಯ ಸಭೆಯಲ್ಲಿ ಕಾಣಿಸಿಕೊಂಡಿದ್ದರು. ನಂತರ, ಈ ಯಾರೂ ಪ್ರಚಾರದಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಇದು ಜೆಡಿಎಸ್‌ ಮೈತ್ರಿ ಧರ್ಮ ಪಾಲಿಸುತ್ತಿದ್ದೆಯೇ? ಎಂಬ ಚರ್ಚೆಯನ್ನು ಹುಟ್ಟು ಹಾಕಿದೆ!

Tags: