ತಿ.ನರಸೀಪುರ : ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ಮೈಸೂರು-ತಿ.ನರಸೀಪುರ ಮುಖ್ಯ ರಸ್ತೆಯ ಎಂ.ಸಿ.ಹುಂಡಿ ಗ್ರಾಮದ ಬಳಿ ನಡೆದಿದೆ.
ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮದ ರವಿಕುಮಾರ್ (೬೫) ಮೃತಪಟ್ಟವರು.
ಮೃತ ರವಿಕುಮಾರ್ ಅವರ ಸಹೋದರಿ ಶಾರದಮ್ಮ ಮತ್ತು ಪತ್ನಿ ಸವಿತಾ ಸೇರಿದಂತೆ ಗಾಯಗೊಂಡಿರುವ ಏಳು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮರಳು ಗುತ್ತಿಗೆದಾರ ಕೆಂಪಯ್ಯನಹುಂಡಿ ಗ್ರಾಮದ ಕೆ.ಅರುಣ್ ಕುಮಾರ್ ಅವರ ಭಾವ ರವಿಕುಮಾರ್ ವ್ಯವಸಾಯ ಮಾಡಿಕೊಂಡಿದ್ದರು. ಭಾನುವಾರ ಬೆಳಿಗ್ಗೆ ಕೆ.ಆರ್. ನಗರದಲ್ಲಿ ನಡೆಯುತ್ತಿದ್ದ ಮದುವೆಗೆ ತಮ್ಮ ಪತ್ನಿ ಸವಿತಾ ಹಾಗೂ ಅಕ್ಕ ಶಾರದಮ್ಮ ಅವರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದರು. ಮದುವೆ ಮುಗಿಸಿಕೊಂಡು ಊರಿಗೆ ಹಿಂತಿರುಗುತ್ತಿದ್ದ ವೇಳೆ ಮದುವೆ ಮುಗಿಸಿಕೊಂಡು ಬರುವ ವೇಳೆ ಎಂ.ಸಿ.ಹುಂಡಿ ಬಳಿ ಎದುರಿನಿಂದ ಬಂದ ಮಾರುತಿ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ:-ಗುಂಡ್ಲುಪೇಟೆ | ಕಾರು-ಲಾರಿ ಡಿಕ್ಕಿ : ಇಬ್ಬರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗಂಭೀರ
ಎದುರಿನಿಂದ ಬರುತ್ತಿದ್ದ ಕಾರಿನಲ್ಲಿ ಇದ್ದವರು ಮೈಸೂರಿನ ಬೆಲವತ್ತ ಮಂಟಿಯವರಾಗಿದ್ದು ಚಾಮರಾಜನಗರದಲ್ಲಿ ನಡೆಯುತ್ತಿದ್ದ ಸೀಮಂತ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದರು ಎಂದು ತಿಳಿದುಬಂದಿದೆ. ಈ ಕಾರಿನಲ್ಲಿದ್ದ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ವರುಣ ಪೊಲೀಸ್ ಠಾಣೆಯ ಎಸ್‌ಐ ಲೋಕೇಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿದರು. ಈ ಸಂಬಂಧ ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಕಿಡಿಗೇಡಿಗಳು ಬೆಂಕಿ ಹಚ್ಚಿದ ಕೃತ್ಯಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಕೆಲವು ಪ್ರದೇಶ ಹೊತ್ತಿಉರಿದಿದ್ದು,ಕೆಲಕಾಲ ಆತಂಕ ನಿರ್ಮಾಣವಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ರಿಂಗ್…
ಮೈಸೂರು : ನಗರದ ಅಪೋಲೋ ಬಿಜಿಎಸ್ ಆಸ್ಪತ್ರೆಯು ಮೈಸೂರಿನಲ್ಲಿ ಮೊದಲ ಸಮಗ್ರ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಆರಂಭಿಸಿದೆ. ಇದು ಈ ವ್ಯಾಪ್ತಿಯಲ್ಲಿ…
ಬೆಂಗಳೂರು : ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ…
ಬಾಗಲಕೋಟೆ : 2025-26ರ ಬಜೆಟ್ ನಲ್ಲಿ ಮಾಡಿದ ಘೋಷಣೆಯಂತೆ ಬಾದಾಮಿಯ ಐತಿಹಾಸಿಕ ಪರಂಪರೆಯನ್ನು ಸಾರುವ ಚಾಲುಕ್ಯ ಉತ್ಸವವಕ್ಕೆ ಚಾಲನೇ ನೀಡಲು…
ಹೊಸದಿಲ್ಲಿ : ನಿರೀಕ್ಷೆಯಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಬಿಹಾರ ಮೂಲದ ನಿತಿನ್ ನಬಿನ್ ಅವರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ…
ಬೆಂಗಳೂರು : ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಈ ಬೆನ್ನಲ್ಲೇ ಡಿಜಿಪಿ ರಾವ್ ಅವರು ಹತ್ತು…