ಟಿ.ನರಸೀಪುರ: ಹಾಲಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಅಂಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಂಕನಹಳ್ಳಿ ಗ್ರಾಮದ ಮಹದೇವು ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಬನ್ನೂರು ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ:- ವಿಮಾನ ದುರಂತ ಪ್ರಕರಣ: ಘಟನಾ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ





