ಮೈಸೂರು

ಹುಣಸೂರು : ಹುಲಿ ಸೆರೆಗೆ ಕೂಬಿಂಗ್‌ ಕಾರ್ಯಾಚರಣೆ

ವೀರನಹೊಸಹಳ್ಳಿ: ಹನಗೋಡಿಗೆ ಸಮೀಪದ ನೇರಳಕುಪ್ಪೆ ಗ್ರಾ.ಪಂ.ನ ನೇಗತ್ತೂರಿನಲ್ಲಿ ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಹುಲಿ ಪತ್ತೆಗೆ ಸಾಕಾನೆ ಸಹಾಯದೊಂದಿಗೆ ಶುಕ್ರವಾರ ಕೂಂಬಿಂಗ್ ಕಾರ್ಯ ಆರಂಭಿಸಲಾಗಿದೆ.

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಶೆಟ್ಟಹಳ್ಳಿ ಅರಣ್ಯ ಪ್ರದೇಶದಂಚಿನ ನೇಗತ್ತೂರಿನ ವೆಂಕಟೇಶ್ ರವರ ಜಮೀನಿನಲ್ಲಿ ಹಸುವೊಂದು ಮೇವು ಮೇಯುತ್ತಿದ್ದ ವೇಳೆ ಹುಲಿ ದಾಳಿ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಹುಣಸೂರು ಆರ್‌ಎಫ್‌ಒ ಸುಬ್ರಹ್ಮಣ್ಯರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ನಂತರ ಹುಲಿ ಪತ್ತೆಗೆ ಸಾಕಾನೆ ಗಣೇಶನ ನೆರವಿನಿಂದ ಅರಣ್ಯ ಇಲಾಖೆ ಸಿಬ್ಬಂದಿ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದ್ದಾರೆ.

ಈ ಹಿಂದೆಯೂ ಅನೇಕ ಬಾರಿ ಹುಲಿ ದಾಳಿ ನಡೆಸಿದಾಗ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದರೂ ಹುಲಿ ದಾಳಿ ಮಾತ್ರ ನಿಂತಿಲ್ಲ. ಇದೀಗ ಮತ್ತೆ ಹುಲಿ ಕಾಣಿಸಿಕೊಂಡು ಕಾರ್ಯಾಚರಣೆ ನಡೆಸುತ್ತಿದ್ದರೂ, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದ್ದು, ಕೂಡಲೇ ಹುಲಿ ಸೆರೆಹಿಡಿದು ನೆಮ್ಮದಿಯ ಬದುಕಿಗೆ ಅವಕಾಶ ಕಲ್ಪಿಸಬೇಕೆಂದು ಉದ್ಯಾನದಂಚಿನ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಶುಕ್ರವಾರ ಗಣೇಶ ಎಂಬ ಸಾಕಾನೆ ಸಹಾಯದಿಂದ ಹುಲಿ ಪತ್ತೆ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಇದಲ್ಲದೆ ಹುಲಿ ಚಲನ-ವಲನದ ಬಗ್ಗೆ ಗಮನಿಸಲು ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ಚಿತ್ರಗಳನ್ನಾಧರಿಸಿ ಮತ್ತೆ ಹುಲಿ ಕಾರ್ಯಾಚರಣೆ ನಡೆಸಲಾಗುವುದು ಎಂದು ಆರ್‌ಎಫ್‌ಒ ಸುಬ್ರಹ್ಮಣ್ಯ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

35 mins ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

37 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

39 mins ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

42 mins ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

47 mins ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

55 mins ago