ಮೈಸೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ವಾಣಿಜ್ಯ ವಿಭಾಗದಲ್ಲಿ ಮೈಸೂರು ಜಿಲ್ಲೆಯ ವಿದ್ಯಾರ್ಥಿನಿ ಎಂ.ಎ.ತೇಜಸ್ವಿನಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ.
ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಭಾರತಮ್ಮ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿರುವ ಎಂಎ. ತೇಜಸ್ವಿನಿ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 598 ಅಂಕ ಪಡೆದಿದ್ದಾರೆ.
ಎಂ.ಎ ತೇಜಸ್ವಿನಿ ರಾಜ್ಯಕ್ಕೆ ಎರಡನೇ ಸ್ಥಾನ ಬಂದಿರುವುದಕ್ಕೆ ಕುಟುಂಬಸ್ಥರು ತುಂಬಾ ಖುಷಿಯಲ್ಲಿದ್ದು, ಮಗಳಿಗೆ ಸಹಿ ತಿನಿಸುವ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ. ಜೊತೆಗೆ ಅಕ್ಕಪಕ್ಕದ ಮನೆಯವರು, ಕಾಲೇಜಿನ ಶಿಕ್ಷಕರು, ಸಂಬಂಧಿಗಳು ತೇಜಸ್ವಿನಿ ಮನೆಗೆ ಭೇಟಿ ನೀಡಿ ಸಿಹಿ ತಿನ್ನಿಸಿ ಶುಭ ಹಾರೈಸಿದರು.





