Mysore
22
overcast clouds

Social Media

ಭಾನುವಾರ, 02 ಆಗಸ್ಟ್ 2026
Light
Dark

ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ : ಯತೀಂದ್ರ ಸಿದ್ದರಾಮಯ್ಯ

ಬೀದರ್ : ಹೈಕಮಾಂಡ್ ಅಂದರೆ ಹೈಕಮಾಂಡೇ, ಅವರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ. ನಾನು ಅದನ್ನೇ ಶುಕ್ರವಾರ ಹೇಳಿದ್ದು, ಹೈಕಮಾಂಡ್ ಸದ್ಯಕ್ಕೆ ನಾಯಕತ್ವ ಬದಲಾವಣೆ ಬಗ್ಗೆ ಹೇಳಿಲ್ಲ, ಹಾಗಾಗಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ನಾನು ಹೇಳಿದ್ದು ಎಂದು ಡಾ ಯತೀಂದ್ರ ಸಿದ್ದರಾಮಯ್ಯ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಮೂಲಕ ಯುಟರ್ನ್ ಹೊಡೆದಿದ್ದಾರೆ.

ಶುಕ್ರವಾರ ಮೈಸೂರಿನಲ್ಲಿ ಮಾತನಾಡುವ ವೇಳೆ ಹೈಕಮಾಂಡ್ ಸದ್ಯಕ್ಕೆ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುತ್ತಿಲ್ಲ, ತಂದೆಯರೇ 5 ವರ್ಷ ಸಿಎಂ ಆಗಿ ಇರುತ್ತಾರೆ ಎಂದು ನಾನು ಅಂದುಕೊಳ್ಳುತ್ತೇನೆ ಎಂದಿದ್ದರು. ಅದಕ್ಕೆ ಡಿ.ಕೆ. ಶಿವಕುಮಾರ್ ಯತೀಂದ್ರ ಅವರು ಹೇಳಿದ ಮೇಲೆ ಮುಗೀತು, ಅವರೇ ಹೈಕಮಾಂಡ್ ಎಂದು ಭಾವಿಸೋಣ ಎಂದಿದ್ದರು.

ಈ ಬಗ್ಗೆ ಬೀದರ್‌ನಲ್ಲಿ ಸುದ್ದಿಗಾರರು ಕೇಳಿದಾಗ, ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ. ಎಲ್ಲಾ ಪಕ್ಷಗಳಲ್ಲಿಯೂ ಮುಖ್ಯಮಂತ್ರಿ ಆಕಾಂಕ್ಷಿಗಳು ಇರುತ್ತಾರೆ. ನಿಜವಾದ ಅರ್ಹತೆ ಇರುವವರು ಸಹ ಕೇಳುತ್ತಿರುತ್ತಾರೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ, ನಮ್ಮ ಪಕ್ಷದಲ್ಲೇನೂ ಹೊಸ ವಿಚಾರವಲ್ಲ, ಹೈಕಮಾಂಡ್ ಸದ್ಯಕ್ಕೆ ಏನೂ ಹೇಳಿಲ್ಲ, ಹೀಗಾಗಿ ಸಿದ್ದರಾಮಯ್ಯನವರೇ ಮುಂದುವರಿಯುತ್ತಾರೆ ಎಂದರು.

 

Tags:
error: Content is protected !!