ಬೀದರ್ : ಹೈಕಮಾಂಡ್ ಅಂದರೆ ಹೈಕಮಾಂಡೇ, ಅವರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ. ನಾನು ಅದನ್ನೇ ಶುಕ್ರವಾರ ಹೇಳಿದ್ದು, ಹೈಕಮಾಂಡ್ ಸದ್ಯಕ್ಕೆ ನಾಯಕತ್ವ ಬದಲಾವಣೆ ಬಗ್ಗೆ ಹೇಳಿಲ್ಲ, ಹಾಗಾಗಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ನಾನು ಹೇಳಿದ್ದು ಎಂದು ಡಾ ಯತೀಂದ್ರ ಸಿದ್ದರಾಮಯ್ಯ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಮೂಲಕ ಯುಟರ್ನ್ ಹೊಡೆದಿದ್ದಾರೆ.
ಶುಕ್ರವಾರ ಮೈಸೂರಿನಲ್ಲಿ ಮಾತನಾಡುವ ವೇಳೆ ಹೈಕಮಾಂಡ್ ಸದ್ಯಕ್ಕೆ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುತ್ತಿಲ್ಲ, ತಂದೆಯರೇ 5 ವರ್ಷ ಸಿಎಂ ಆಗಿ ಇರುತ್ತಾರೆ ಎಂದು ನಾನು ಅಂದುಕೊಳ್ಳುತ್ತೇನೆ ಎಂದಿದ್ದರು. ಅದಕ್ಕೆ ಡಿ.ಕೆ. ಶಿವಕುಮಾರ್ ಯತೀಂದ್ರ ಅವರು ಹೇಳಿದ ಮೇಲೆ ಮುಗೀತು, ಅವರೇ ಹೈಕಮಾಂಡ್ ಎಂದು ಭಾವಿಸೋಣ ಎಂದಿದ್ದರು.
ಈ ಬಗ್ಗೆ ಬೀದರ್‌ನಲ್ಲಿ ಸುದ್ದಿಗಾರರು ಕೇಳಿದಾಗ, ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ. ಎಲ್ಲಾ ಪಕ್ಷಗಳಲ್ಲಿಯೂ ಮುಖ್ಯಮಂತ್ರಿ ಆಕಾಂಕ್ಷಿಗಳು ಇರುತ್ತಾರೆ. ನಿಜವಾದ ಅರ್ಹತೆ ಇರುವವರು ಸಹ ಕೇಳುತ್ತಿರುತ್ತಾರೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ, ನಮ್ಮ ಪಕ್ಷದಲ್ಲೇನೂ ಹೊಸ ವಿಚಾರವಲ್ಲ, ಹೈಕಮಾಂಡ್ ಸದ್ಯಕ್ಕೆ ಏನೂ ಹೇಳಿಲ್ಲ, ಹೀಗಾಗಿ ಸಿದ್ದರಾಮಯ್ಯನವರೇ ಮುಂದುವರಿಯುತ್ತಾರೆ ಎಂದರು.
ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗ ಪತ್ರ ನೀಡಲಾಗಿದೆ. ೨೦೨೩ರಲ್ಲಿ ಕಾಂಗ್ರೆಸ್ ನಾಯಕ…
‘ಆಂದೋಲನ’ ದಿನ ಪತ್ರಿಕೆಯ ಏ.೧೯ರ ‘ಹಾಡು ಪಾಡು’ ಸಂಚಿಕೆಯಲ್ಲಿ ‘ಪಂಪ ಪ್ರಶಸ್ತಿ’ ಸಂದ ಹಿನ್ನೆಲೆಯಲ್ಲಿ ದೇವನೂರ ಮಹಾದೇವ ಅವರ ಬಗ್ಗೆ…
ಮೈಸೂರಿನ ಹಾರ್ಡಿಂಜ್ ವೃತ್ತದ ಮೂಲಕ ಮೈಸೂರಿನಿಂದ- ಚಾಮರಾಜ ನಗರ, ಗುಂಡ್ಲುಪೇಟೆ, ಹಾಸನ, ಮಂಗಳೂರು, ಮಡಿಕೇರಿ, ಚಿಕ್ಕಮಗಳೂರು, ಹಾಗೂ ಇನ್ನಿತರ ಸ್ಥಳಗಳ…
ಪ್ರೊ.ಬಿ.ಜಯಪ್ರಕಾಶ್‌ಗೌಡ ಡಾ.ರಾಮೇಗೌಡ, ದಿ.ಸಿಂಗಾರಿಗೌಡ ಹೆಸರಲ್ಲಿ ಗೌರವ ವಿಮರ್ಶಕ, ಜಾನಪದ ತಜ್ಞ ಡಾ.ರಾಮೇಗೌಡ ಮತ್ತು ಸರಳ ಸಜ್ಜನ ರಾಜಕಾರಣಿ ದಿ. ಸಿಂಗಾರಿಗೌಡ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಏಪ್ರಿಲ್ ೧೨, ೨೦೦೬. ಶಿವರಾಜಕುಮಾರ್ ಅಭಿನಯದ ‘ಕುಮಾರ ರಾಮ; ಚಿತ್ರದ ಚಿತ್ರೀಕರಣ. ಭಾರ್ಗವ ನಿರ್ದೇಶಕರು. ಹಂಪಿಯಲ್ಲಿ…
ನವೀನ್ ಡಿಸೋಜ ಮಡಿಕೇರಿ: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕಳೆದ ಬಾರಿ ನಾಲ್ಕನೇ ಸ್ಥಾನದಲ್ಲಿದ್ದ ಕೊಡಗು ಈ ಬಾರಿ ೮ನೇ…