Compensation of ₹1.06 Crore Given to Family of Lineman Who Died on Duty
ಮೈಸೂರು : ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳ ಆರೋಗ್ಯ ಮತ್ತು ಸುರಕ್ಷತೆಗೆ ಸದಾ ಬದ್ಧವಾಗಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಕರ್ತವ್ಯನಿರತ ವೇಳೆ ಪ್ರಾಣ ಕಳೆದುಕೊಂಡ ಕಿರಿಯ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ರೂ. ಪರಿಹಾರದ ಚೆಕ್ ವಿತರಣೆ ಮಾಡಲಾಯಿತು.
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಶನಿವಾರ ಸರ್ಕಾರದ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶುಂಕುಸ್ಥಾಪನೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇಂಧನ ಸಚಿವ ಕೆ.ಜಾರ್ಜ್ ಅವರು ಇತ್ತೀಚೆಗೆ ಕರ್ತವ್ಯನಿರತದ ವೇಳೆ ಪ್ರಾಣಕಳೆದುಕೊಂಡು ಸೆಸ್ಕ್ ವ್ಯಾಪ್ತಿಯ ಪಾಂಡವಪುರ ಉಪ ವಿಭಾಗದ ಕಿರಿಯ ಪವರ್ ಮ್ಯಾನ್ ಮಹೇಶ್ (27 ವರ್ಷ) ಅವರ ಕುಟುಂಬಕ್ಕೆ 1.06 ಕೋಟಿ ರೂ.ಗಳ ಪರಿಹಾರದ ಚೆಕ್ ವಿತರಿಸಿದರು.
ಮೃತ ಪವರ್ ಮ್ಯಾನ್ ಮಹೇಶ್ ಅವರ ತಂದೆ ಬೋರೇಗೌಡ ಅವರು ಪರಿಹಾರದ ಚೆಕ್ ಸ್ವೀಕರಿಸಿದರು. ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷರೂ ಆಗಿರುವ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್ ರಾಜು, ಮೈಸೂರು ವಿಭಾಗದ ಅಧೀಕ್ಷಕ ಇಂಜಿನಿಯರ್ ಸುನೀಲ್ ಮತ್ತಿತರರ ಇದ್ದರು.
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…
ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…
ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…