ಮೈಸೂರು

ಆತಂಕ ಬಿಟ್ಟು ಸ್ಪರ್ಧಾತ್ಮಕ ಪರೀಕ್ಷೆಎದುರಿಸಿ ; ಶೇಖ್‌ ತನ್ವೀರ್‌ ಆಸೀಫ್‌

ಮೈಸೂರು : ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವಾಗ ಆತಂಕ ಬಿಟ್ಟು, ಭರವಸೆ ಹೆಚ್ಚಿಸಿಕೊಳ್ಳಿ. ಏಕಾಗ್ರತೆ ಮತ್ತು ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ವಿಧ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದ ವತಿಯಿಂದ ಕಾವೇರಿ ಸಭಾಂಗಣದಲ್ಲಿ ಬುಧವಾರ ನಡೆದ ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷಾ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪರೀಕ್ಷೆ ಯಶಸ್ಸಿನ ತಂತ್ರಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡ ಅವರು, ಆತ್ಮವಿಶ್ವಾಸ, ಸಮಯ ಪಾಲನೆ, ನೆನಪಿನ ಶಕ್ತಿ, ಪರೀಕ್ಷೆ ಬರೆಯುವ ತಂತ್ರ ಕಲಿತರೆ ಗೆಲುವು ನಿಮ್ಮದೆ ಎಂದು ಹೇಳಿದರು.

ಪರೀಕ್ಷೆ ಬಗ್ಗೆ ತಿಳಿವಳಿಕೆ ಇರಬೇಕು. ಪಠ್ಯಕ್ರಮ, ಪರೀಕ್ಷೆ ಮಾದರಿ, ಹಿಂದಿನ ವರ್ಷದ ಪ್ರಶ್ನೆ ಪ್ರತ್ರಿಕೆಗಳ ಅಧ್ಯಯನದ ಜೊತೆಗೆ ಪ್ರತಿನಿತ್ಯ ದಿನಪತ್ರಿಕೆ, ನಿಮ್ಮಿಷ್ಟದ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಿ. ಅಹಂಕಾರ ಬಿಡಿ ಮಾನವೀಯತೆ ಬೆಳೆಸಿಕೊಳ್ಳಿ ಎಂದು ಸಲಹೆ ನೀಡಿದರು.

ಓದುವ ಸಮಯದಲ್ಲಿ ನಿಮ್ಮ ಸುತ್ತಮುತ್ತಲಿನ ಪರಿಸರ, ಜನಸಾಮಾನ್ಯರ ಸಮಸ್ಯೆ, ಜೈವಿಕ ಬದಲಾವಣೆಗಳ ಬಗ್ಗೆ ತಿಳಿದುಕೊಳ್ಳಿ. ಪ್ರತಿ ವರ್ಷದ ಪ್ರಶ್ನೆ ಪತ್ರಿಕೆ ತಾಳೆಹಾಕಿ ಜೊತೆಗೆ ಪ್ರತಿದಿನ ನಿಮ್ಮ ಶಬ್ದಕೋಶ ಹೆಚ್ಚಿಸಿಕೊಳ್ಳಿ ಎಂದು ಹೇಳಿದರು.

ಸಮಸ್ಯೆ ಎಂತದ್ದೆ ಇರಲಿ ಎದುರಿಸುವ ‌ಧೈರ್ಯ ಬೆಳೆಸಿಕೊಳ್ಳಿ. ಪರೀಕ್ಷೆ ಬಗ್ಗೆ ಗಮನದ ಜೊತೆಗೆ ಕಣ್ಣಿನ ನೋಟ ಗುರಿಯ ಕಡೆ ಇರಲಿ ಎಂದರು.

ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಮೈಸೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ.ಮಾಲತಿ ಪ್ರಿಯಾ ಅವರು, ವಿದ್ಯಾರ್ಥಿ ಜೀವನದಲ್ಲಿ ಪರೀಕ್ಷೆ ಇದ್ದೇ ಇರುತ್ತೆ. ಅವುಗಳನ್ನು ಧೈರ್ಯದಿಂದ ಎದುರಿಸಿ ನಿಮ್ಮ ಗುರಿ ತಲುಪಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಎಲ್ಲ ಕ್ಷೇತ್ರದಲ್ಲೂ ಮಹಿಳೆಯರು ಹೆಚ್ಚಬೇಕು. ಇಲ್ಲಿಯೂ ಸಹ ಮಹಿಳಯರೇ ಹೆಚ್ಚಿದ್ದೀರಾ. ಮಹಿಳೆಯರ ಶ್ರದ್ದೆ ಮತ್ತು ನಿಷ್ಠೆ ಇಂದಿನ ಕೆಲಸಗಳಿಗೆ ತುಂಬಾ ಅನಿವಾರ್ಯ ಎಂದು ಹೇಳಿದರು.

ಮೊಬೈಲ್ ಗೀಳು ಯುವ ಸಮೂಹ ಹಾಗೂ ಸಮಾಜವನ್ನು ಹಾಳು ಮಾಡುತ್ತಿದೆ. ಸಮಯವೇ ಸಿಗುತ್ತಿಲ್ಲ ಎಂದು ಬೊಬ್ಬೆ ಹೊಡೆಯುವ ಜನರು ಮೊಬೈಲ್ ನಲ್ಲಿ ರೀಲ್ಸ್ ಸ್ಕ್ರಾಲ್ ಮಾಡೊದು ಬಿಟ್ಟು ನೋಡಿ ನಿಮ್ಮ ಸಮಯ ಎಲ್ಲಿ ಕಳೆದು ಹೋಗುತ್ತಿದೆ ಎಂದು ಗೊತ್ತಾಗುತ್ತದೆ. ಮುಖ್ಯವಾಗಿ ಯುವ ಸಮೂಹ ಮೊಬೈಲ್ ಗೀಳಿನಿಂದ ಹೊರಬಂದು ಪರಿಶ್ರಮ ಪಟ್ಟು ಅಧ್ಯಯನ ಮಾಡಬೇಕು ಎಂದು ನುಡಿದರು.

ಸಮಯ ನಿರ್ವಹಣೆಯ ಬಗ್ಗೆಯೂ ಗಮನ ಹರಿಸಿ. ದುಶ್ಚಟಗಳಿಂದ ದೂರ ಉಳಿದು ಮಾದರಿ ವ್ಯಕ್ತಿತ್ವ ರೂಪಿಸಿಕೊಳ್ಳಿ ಎಂದು‌ ಹೇಳಿದರು.

ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ ಅವರು ಮಾತನಾಡಿ, ವಿದ್ಯಾರ್ಥಿಗಳು ಸತತ ಪ್ರಯತ್ನ ಪಟ್ಟು ಓದಬೇಕು. ನಿಮ್ಮ ನಿರಂತರ ಪ್ರಯತ್ನದಿಂದ ಎಲ್ಲವೂ ಸಾಧ್ಯ ಎಂದು ಹೇಳಿದರು.

ಗುರು-ಹಿರಿಯರು ಹಾಗೂ ಅನುಭವಿಗಳು ಹೇಳುವ ಅನುಭವಗಳನ್ನು ಚಾಚುತಪ್ಪದೆ ಪಾಲಿಸಬೇಕು. ಅರಿವೇ ಗುರು ಎನ್ನುವ ಹಾಗೆ ನಿಮ್ಮನ್ನು ನೀವೆ ಆತ್ಮ ಅವಲೋಕನೆ ಮಾಡಿಕೊಳ್ಳಿ. ಯಶಸ್ಸಿಗೆ ಗುರಿ ದೊಡ್ಡದಾಗಿರಲಿ. ಎಲ್ಲರೂ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಭವಿಷ್ಯದಲ್ಲಿ ದೇಶಕ್ಕೆ ಮಾದರಿಯಾಗುವ ಅಧಿಕಾರಿಗಳಾಗಿ ಎಂದು ಶುಭಹಾರೈಸಿದರು.

ಕುಲಸಚಿವ ಪ್ರೊ.ಕೆ.ಬಿ ಪ್ರವೀಣ  ಮಾತನಾಡಿ, ವಿದ್ಯಾರ್ಥಿಗಳು ಹಾರ್ಡ್ ವರ್ಕ್ ಜೊತೆಗೆ ಸ್ಮಾರ್ಟ ವರ್ಕ್ ಮಾಡಬೇಕು. ಏನೇ ಮಾಡಿದರು ಆಸೆ ಪಟ್ಟು ಮಾಡಿ. ಆವಾಗ ಎಲ್ಲವೂ ಸಕಾರಗೊಳ್ಳುವುದು ಎಂದರು.

ನಮ್ಮ ಕೆ.ಎಸ್.ಒ.ಯು ವಿವಿಯು ಇಂತಹ ಅನೇಕ ತರಬೇತಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಇದರ ಲಾಭ ಪಡೆದ ವಿದ್ಯಾರ್ಥಿಗಳು ದೇಶಕ್ಕೆ ಸೇವೆ ಮಾಡಿ. ಜೊತೆಗೆ ಇಲ್ಲಿನ ಶೈಕ್ಷಣಿಕ ಕೋರ್ಸ್ಗಳನ್ನು ಸಹ ಬಳಸಿಕೊಳ್ಳಿ. ಇಲ್ಲಿಯೂ ಸಹ ಪದವಿ ಪಡೆದುಕೊಳ್ಳಿ. ಈ ವರ್ಷದ ಪ್ರವೇಶಾತಿಗಳು ಈಗಾಗಲೇ ಪ್ರಾರಂಭವಾಗಿದೆ. ಪ್ರವೇಶಾತಿ ಪಡೆದುಕೊಳ್ಳಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪರೀಕ್ಷಾಂಗ ಕುಲಸಚಿವ ಹೆಚ್.ವಿಶ್ವನಾಥ್, ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ, ಸಿದ್ದೇಶ್, ಗಣೇಶ್ ಸೇರಿದಂತೆ ಇತರರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಾಮರಾಜನಗರ| ಕಾಡಾನೆ ದಾಳಿ: ವ್ಯಕ್ತಿ ಸಾವು

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್‌ನಲ್ಲಿ…

20 mins ago

ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ: ಬಿ.ವೈ.ವಿಜಯೇಂದ್ರ ಲೇವಡಿ

ಬೆಳಗಾವಿ: ಸಿದ್ದರಾಮಯ್ಯ ಔಟ್‌ ಗೋಯಿಂಗ್‌ ಸಿಎಂ. ಇದು ಅವರ ಕೊನೆಯ ಅಧಿವೇಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಲೇವಡಿ ಮಾಡಿದ್ದಾರೆ.…

24 mins ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಕುವೆಂಪು ನಗರದ ಅಪೋಲೋ ಆಸ್ಪತ್ರೆಯ ಹಿಂಭಾಗ ದಲ್ಲಿರುವ ಬಿಜಿಎಸ್ ಪದವಿಪೂರ್ವ ಕಾಲೇಜಿನ ಎದುರಿನ ದೊಡ್ಡಮೋರಿ ಯಿಂದ ತೆಗೆದ ಕಸವನ್ನು…

1 hour ago

ಓದುಗರ ಪತ್ರ: ರೈತರ ಆತ್ಮಹತ್ಯೆ ತಡೆಗೆ ಕ್ರಮ ಕೈಗೊಳ್ಳಿ

ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ)…

1 hour ago

ಓದುಗರ ಪತ್ರ: ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡಿ

ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ…

1 hour ago

ವಿಕಸಿತ್ ಭಾರತ್- ಜಿ ರಾಮ್ ಜಿ: ಮಹಾತ್ಮನನ್ನು ಮರೆಗೆ ಸರಿಸುವ ಹುನ್ನಾರ

ಕೇಂದ್ರ ಸರ್ಕಾರದಲ್ಲಿ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವರಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ಡಿಸೆಂಬರ್ ೧೬ರಂದು…

1 hour ago