ಮೈಸೂರು

ನನ್ನ ಧ್ವನಿ ಅಡಗಿಸಲು ದೂರು ದಾಖಲಿಸಲಾಗಿದೆ: ಪ್ರತಾಪ ಸಿಂಹ ಆರೋಪ

ಮೈಸೂರು: ನನ್ನ ಧ್ವನಿ ಅಡಗಿಸಲು ನನ್ನ ಮೇಲೆ ಸರ್ಕಾರ ದೂರು ದಾಖಲಿಸಿದೆ ಎಂದು ಮಾಜಿ ಸಂಸದ ಪ್ರತಾಪ ಸಿಂಹ ದೂರಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದಯಗಿರಿ ಗಲಭೆಗೆ ಪ್ರಚೋದನೆ ನೀಡಿದ ಮೌಲ್ವಿಯನ್ನು ಏಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದರು.

ಪುಂಡ ಮುಸ್ಲಿಮರು ಸಾವಿರಾರು ಸಂಖ್ಯೆಯಲ್ಲಿ ಸೇರಿಕೊಂಡು ಪೊಲೀಸರ ಮೇಲೆ ಆಕ್ರಮಣ ಮಾಡಿದರು. ಈ ಘಟನೆ ಬೆನ್ನಲ್ಲೇ ಪೊಲೀಸ್ ಠಾಣೆಗೆ ಭೇಟಿ ನೀಡಿ ಪೊಲೀಸರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದೆವು. ಧೈರ್ಯದಿಂದ ಇರಿ ಎಂದು ಮಾತನಾಡಿದೆವು. ಇದು ಪ್ರಚೋದನಕಾರಿ ವಿಚಾರವೆ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನನ್ನ ವಿರುದ್ಧ ಹಲವು ಎಫ್‌ಐಆರ್ ದಾಖಲಿಸಿದೆ. ವಿಧಾನಸಭಾ ಚುನಾವಣೆಯ ವೇಳೆ ವರುಣದಲ್ಲಿ ೨, ಶಿಗ್ಗಾಂವಿ, ದಾವಣಗೆರೆ, ಬೆಂಗಳೂರಿನ ಬಸವೇಶ್ವರ ನಗರ, ಮಾಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಿದ್ದರು. ಈಗ ಉದಯಗಿರಿ ಪ್ರಕರಣದೊಂದಿಗೆ ಸಾಲು ಸಾಲು ಎಫ್‌ಐಆರ್ ಹಾಕಿ ಆತ್ಮಸ್ಥೈರ್ಯ ಕುಗ್ಗಿಸಿ ಮನೆಯಿಂದ ಹೊರಬರಬಾರದು ಎಂಬ ಉದ್ದೇಶದಿಂದ ಈ ರೀತಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮುಸ್ಲಿಮರು ತಮ್ಮ ಮಕ್ಕಳನ್ನು ದೇವರು ಕೊಟ್ಟಿದ್ದು ಎನ್ನುತ್ತಾರೆ. ಹಾಗಾದರೆ ನಿಮ್ಮ ಮಕ್ಕಳನ್ನು ದೇವರೇ ನೋಡಿಕೊಳ್ಳಲಿ. ಸರ್ಕಾರ ಏಕೆ ನೋಡಿಕೊಳ್ಳಬೇಕು? ಅತಿ ಹೆಚ್ಚು ತೆರಿಗೆ ಕಟ್ಟುವವರು ಹಿಂದೂಗಳು. ಆದರೆ ಸೌಲಭ್ಯ ಮುಸ್ಲಿಮರಿಗೆ ಸಿಗುತ್ತಿದೆ. ಈ ಸತ್ಯ ಹೇಳಿದರೆ ಪ್ರಚೋದನೆ ಹೇಗಾಗುತ್ತದೆ? ನನ್ನ ಧ್ವನಿ ಅಡಗಿಸಬೇಕು ಎಂಬ ವ್ಯವಸ್ಥಿತ ಪ್ರಯತ್ನ ಕಳೆದ ೧೦ ವರ್ಷದಿಂದಲೂ ನಡೆದಿದೆ. ಆದರೆ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ನಿರಂತರ ಧ್ವನಿ ಎತ್ತುವೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

5 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

5 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

7 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

9 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

12 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

12 hours ago