ಮೈಸೂರು : ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸದೆ ವ್ಯರ್ಥ ವಾದರೆಆದರೆ ಸಂಬಂದಿಸಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ ಎಸ್. ಸೆಲ್ವ ಕುಮಾರ್ ಅವರು ತಿಳಿಸಿದರು.
ಇಂದು ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಸ್ ಶೆಲ್ಟರ್ ಗಳ ನಿರ್ಮಾಣ ಕಾಮಗಾರಿಗಳನ್ನು ಮಾಡಲು ಜಿಲ್ಲಾ ಪಂಚಾಯತ್ ಅನುದಾನದಲ್ಲಿ ಕ್ರಿಯಾ ಯೋಜನೆ ರೂಪಿಸಿಕೊಳ್ಳಿ, ಸಾಮಾಜಿಕ ಅರಣ್ಯ ಇಲಾಖೆಯ ವತಿಯಿಂದ ನರೇಗಾ ಯೋಜನೆಯಡಿ ರಸ್ತೆ ಬದಿ ಸಸಿಗಳನ್ನು ನೆಟ್ಟು ಪೋಷಣೆ ಮಾಡಬೇಕು.
ನರೇಗಾ ಯೋಜನೆಯಡಿ ಶಾಲಾ ಕಾಂಪೌಂಡ್ ಹಾಗೂ ಶಾಲಾ ಮೈದಾನ ಗಳನ್ನು ಹೆಚ್ಚಿನ ಕಾಮಗಾರಿ ಕೈಗೊಳ್ಳಿ ಎಂದರು.
2021- 22 ನೆಯ ಸಾಲಿನಲ್ಲಿ ಶೇಕಡಾ 85 ರಷ್ಟು ಕಾಮಗಾರಿಗಳು ಪೂರ್ಣಗೊಂಡಿದ್ದು ಉಳಿದ ಶೇಕಡಾ 15 ರಷ್ಟು ಕಾಮಗಾರಿಗಳು ಯಾಕೆ ಪೂರ್ಣಗೊಂಡಿಲ್ಲ. ಉಳಿದ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಲಿಂಕ್ ಡಾಕ್ಯುಮೆಂಟ್ ಯಡಿ ವಿವಿಧ ಇಲಾಖೆಗಳಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಈ ವರ್ಷದ ಆರ್ಥಿಕ ವರ್ಷದಲ್ಲಿಯೇ ಮುಗಿಸಬೇಕು. ಕಾಮಗಾರಿಗಳು ಪೂರ್ಣವಾಗಿದೆ ಹಣ ವಾಪಸ್ ಹೋದರೆ ಸಂಬಂದಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು.
ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಮಾತನಾಡಿ ಸಾಮಾಜಿಕ ಅರಣ್ಯ ಇಲಾಖೆಯ ಅಧಿಕಾರಿಗಳು ಶಾಲಾ ಮೈದಾನಗಳಲ್ಲಿ ಹಾಗೂ ಮೈದಾನಗಳಲ್ಲಿ ಗಿಡಗಳನ್ನು ನೆಟ್ಟು ಬಯೋ ಫೆನ್ಸಿಂಗ್ ಮಾಡಿ, ಇದರಿಂದ ನರೇಗಾ ಯೋಜನೆಯಡಿ ಹೆಚ್ಚಿನ ಮಾನವ ದಿನಗಳ ಪ್ರಗತಿ ಆಗುತ್ತದೆ.
ಯಾವ ಯಾವ ಇಲಾಖೆಗಳು ಕಾಮಗಾರಿಗಳನ್ನು ವಿವಿಧ ಏಜೆನ್ಸಿ ಗಳಿಗೆ ನೀಡಲಾಗಿರುತ್ತದೆ ಆ ಇಲಾಖೆಯ ಅಧಿಕಾರಿಗಳು ಕಾಮಗಾರಿಗಳ ಗುಣಮಟ್ಟದಿಂದ ಪೂರ್ಣಗೊಂಡಿದೆಯೇ ಎಂಬುದನ್ನು ಪರಿಶೀಲನೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕುಡಿಯುವ ನೀರಿನ ಯಾವುದೇ ಸಮಸ್ಯೆ ಇಲ್ಲ. ಜಿಲ್ಲೆಯ ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಕೊಳವೆ ಬಾವಿಗಳಲ್ಲಿ ಉತ್ತಮ ನೀರು ಇದೆ. ಮುಂದೆ ಕುಡಿಯುವ ನೀರಿನ ಸಮಸ್ಯೆ ಕಂಡು ಬರುವ ಗ್ರಾಮಗಳನ್ನು ಗುರುತಿಸಿದ್ದು, ಸಮಸ್ಯೆ ಕಂಡುಬಂದರೆ ಖಾಸಗಿ ಬೋರ್ವೆಲ್ ಗಳನ್ನು ಬಾಡಿಗೆಗೆ ಪಡೆದು ಕುಡಿಯುವ ನೀರನ್ನು ಪೂರೈಸಲಾಗುವುದು.
ಕೃಷಿ ಇಲಾಖೆಯ ವತಿಯಿಂದ ರೈತರಿಗೆ ಫ್ರೂಟ್ಸ್ ಐಡಿ ಕ್ರಿಯೇಟ್ ಮಾಡಲಾಗುತ್ತಿದೆ. ಬರ ಪರಿಹಾರ ಪಡೆಯಲು ಫ್ರೂಟ್ ಐಡಿ ಅತ್ಯವಶ್ಯಕವಾಗಿರುತ್ತದೆ. ಬೆಂಬಲ ಬೆಲೆ ಯೋಜನೆಯಡಿ ರಾಗಿ ಮತ್ತು ಭತ್ತ ವನ್ನು ಖರೀದಿ ಮಾಡಲಾಗುತ್ತಿದೆ. ಬೆಂಬಲ ಬೆಲೆ ಯೋಜನೆಯಡಿ 20 ಸಾವಿರ ರೈತರು ನೋಂದಣಿ ಆಗಿದ್ದಾರೆ ಎಂದರು.