ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣವನ್ನು ಬಯಲಿಗೆಳೆದ ಆರ್ ಟಿಐ ಕಾರ್ಯಕರ್ತರ ವಿರುದ್ಧವೇ ದೂರು ನೀಡಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ವ್ಯಕ್ತಿತ್ವ ಕೆಡಿಸಲು ಸಂಚು ರೂಪಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆರ್ ಟಿಐ ಕಾರ್ಯಕರ್ತರಾದ ಗಂಗರಾಜು, ಮತ್ತು ಸ್ನೇಹಮಹಿ ಕೃಷ್ಣ ವಿರುದ್ಧ ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಗೆ ಮೈಸೂರು ಕಾಂಗ್ರೆಸ್ ಘಟಕ ದೂರು ನೀಡಿದೆ.
ಗ್ರಾಮಾಂತರ ಅಧ್ಯಕ್ಷ ಡಾ.ಬಿಜೆ ವಿಜಯಕುಮಾರ್ ನೇತೃತ್ವದಲ್ಲಿ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ , ಮೈಸೂರು ನಗರಾಧ್ಯಕ್ಷ ಆರ್ ಮೂರ್ತಿ ಅವರು ಗಂಗರಾಜು, ಮತ್ತು ಸ್ನೇಹಮಹಿ ಕೃಷ್ಣ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕಮಿಷನರ್ ಗೆ ಮನವಿ ಮಾಡಿದ್ದಾರೆ.