ಮೈಸೂರು

ಮುಡಾ ಹಗರಣ ಬಯಲಿಗೆಳೆದ RTI ಕಾರ್ಯಕರ್ತರ ವಿರುದ್ಧವೇ ಕಾಂಗ್ರೆಸ್ ದೂರು

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣವನ್ನು ಬಯಲಿಗೆಳೆದ ಆರ್‌ ಟಿಐ ಕಾರ್ಯಕರ್ತರ ವಿರುದ್ಧವೇ ದೂರು ನೀಡಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ವ್ಯಕ್ತಿತ್ವ ಕೆಡಿಸಲು ಸಂಚು ರೂಪಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆರ್‌ ಟಿಐ ಕಾರ್ಯಕರ್ತರಾದ ಗಂಗರಾಜು, ಮತ್ತು ಸ್ನೇಹಮಹಿ ಕೃಷ್ಣ ವಿರುದ್ಧ ನಗರ ಪೊಲೀಸ್‌ ಕಮಿಷನರ್‌ ಸೀಮಾ ಲಾಟ್ಕರ್‌ ಗೆ ಮೈಸೂರು ಕಾಂಗ್ರೆಸ್‌ ಘಟಕ ದೂರು ನೀಡಿದೆ.

ಗ್ರಾಮಾಂತರ ಅಧ್ಯಕ್ಷ ಡಾ.ಬಿಜೆ ವಿಜಯಕುಮಾರ್‌ ನೇತೃತ್ವದಲ್ಲಿ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್‌ , ಮೈಸೂರು ನಗರಾಧ್ಯಕ್ಷ ಆರ್‌ ಮೂರ್ತಿ ಅವರು ಗಂಗರಾಜು, ಮತ್ತು ಸ್ನೇಹಮಹಿ ಕೃಷ್ಣ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಕಮಿಷನರ್‌ ಗೆ ಮನವಿ ಮಾಡಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಲಂಚಕ್ಕೆ ಬೇಡಿಕೆ : ಪಿಎಸ್ಐ ಚೇತನ್ ಲೋಕಾ ಬಲೆಗೆ

ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…

5 mins ago

ಪೊಲೀಸ್‌ ದಾಳಿ : ಮೈಸೂರಲ್ಲಿ ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳ ಪತ್ತೆ

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…

19 mins ago

ಚಿನ್ನಾಭರಣ ಪಡೆದು ವಂಚನೆ : ಮಾಲೀಕನ ಬಂಧನ

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…

26 mins ago

ನಾಳೆ ಕೇಂದ್ರ ಬಜೆಟ್‌ : ಕರ್ನಾಟಕದ ರಾಜ್ಯದ ನಿರೀಕ್ಷೆಗಳೇನು?

ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…

57 mins ago

ಐತಿಹಾಸಿಕ ಮಳವಳ್ಳಿ ಸಿಡಿ ಜಾತ್ರಾ ಮಹೋತ್ಸವ ಸಂಪನ್ನ

ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…

2 hours ago

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…

2 hours ago