Mysore
26
broken clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

ಬಿಜೆಪಿ ಅಭ್ಯರ್ಥಿ ಯದುವೀರ್‌ ವಿರುದ್ಧ ಕಾಂಗ್ರೆಸ್‌ ದೂರು

ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚುನಾವಣೆ ಪ್ರಚಾರಕ್ಕಾಗಿ ಸೋಶಿಯಲ್‌ ಮೀಡಿಯಾದವರಿಗೆ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಈ ಬಗ್ಗೆ ಕೆಪಿಸಿಸಿಯ ಮಾಧ್ಯಮ ಮತ್ತು ಸಂವಹನ ಘಟಕದ ಅಧ್ಯಕ್ಷ ರಮೇಶ್‌ ಬಾಬು ದೂರು ನೀಡಿದ್ದು, ಇತ್ತೀಚೆಗೆ ಮೈಸೂರಿನಲ್ಲಿ ಯದುವೀರ್‌ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯ ಹಾಗೂ ಪ್ರಭಾವಿಗಳಾಗಿರುವ ವ್ಯಕ್ತಿಗಳೊಂದಿಗೆ ಸಭೆ ನಡೆಸಿದ್ದಾರೆ. ಈ ವೇಳೆ ಅನೇಕ ಹಲವು ರೀತಿಯ ವಸ್ತುಗಳನ್ನು ಉಡುಗೊರೆಯಾಗಿ ನೀಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಯದುವೀರ್‌ ಚುನಾವಣಾ ಪಾರದರ್ಶಕತೆಗೆ ಅಪಾಯವನ್ನುಂಟು ಮಾಡುವ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ತಮ್ಮ ಪ್ರಚಾರಕ್ಕೆ ಬೆಂಬಲ ಕೊರುವ ಸಭೆಯಲ್ಲಿ ನೋಟ್‌ಬುಕ್‌, ಪೆನ್‌, ಚಾಕೊಲೇಟ್‌ ಹಾಗೂ ಸೀರೆ ಸೇರಿದಂತೆ ಸಿಹಿತಿನಿಸುಗಳನ್ನು ನೀಡಿ ಸೋಶಿಯಲ್‌ ಮೀಡಿಯಾದ ಪ್ರಭಾವಿಗಳಿಗೆ ಓಲೈಕೆ ಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ಕಾಂಗ್ರೆಸ್‌ ದೂರಿನಲ್ಲಿ ಆರೋಪಿಸಿದೆ.

ಮತದಾರರ ಮೇಲೆ ಪ್ರಭಾವ ಬೀರಲು ಪ್ರೇರೇಪಿಸುವುದೂ ಕೂಡ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಈ ಹಿನ್ನಲೆ ಯದುವೀರ್‌ ಸಭೆಯಲ್ಲಿ ಭಾಗವಹಿಸಿದ್ದ ವ್ಯಕ್ತಿಗಳು ಹಾಗೂ ಆಮಿಷವೊಡ್ಡಿದವರರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ

Tags:
error: Content is protected !!