ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚುನಾವಣೆ ಪ್ರಚಾರಕ್ಕಾಗಿ ಸೋಶಿಯಲ್ ಮೀಡಿಯಾದವರಿಗೆ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಈ ಬಗ್ಗೆ ಕೆಪಿಸಿಸಿಯ ಮಾಧ್ಯಮ ಮತ್ತು ಸಂವಹನ ಘಟಕದ ಅಧ್ಯಕ್ಷ ರಮೇಶ್ ಬಾಬು ದೂರು ನೀಡಿದ್ದು, ಇತ್ತೀಚೆಗೆ ಮೈಸೂರಿನಲ್ಲಿ ಯದುವೀರ್ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯ ಹಾಗೂ ಪ್ರಭಾವಿಗಳಾಗಿರುವ ವ್ಯಕ್ತಿಗಳೊಂದಿಗೆ ಸಭೆ ನಡೆಸಿದ್ದಾರೆ. ಈ ವೇಳೆ ಅನೇಕ ಹಲವು ರೀತಿಯ ವಸ್ತುಗಳನ್ನು ಉಡುಗೊರೆಯಾಗಿ ನೀಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಯದುವೀರ್ ಚುನಾವಣಾ ಪಾರದರ್ಶಕತೆಗೆ ಅಪಾಯವನ್ನುಂಟು ಮಾಡುವ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ತಮ್ಮ ಪ್ರಚಾರಕ್ಕೆ ಬೆಂಬಲ ಕೊರುವ ಸಭೆಯಲ್ಲಿ ನೋಟ್‌ಬುಕ್, ಪೆನ್, ಚಾಕೊಲೇಟ್ ಹಾಗೂ ಸೀರೆ ಸೇರಿದಂತೆ ಸಿಹಿತಿನಿಸುಗಳನ್ನು ನೀಡಿ ಸೋಶಿಯಲ್ ಮೀಡಿಯಾದ ಪ್ರಭಾವಿಗಳಿಗೆ ಓಲೈಕೆ ಮಾಡುವ ಪ್ರಯತ್ನ ಮಾಡಿದ್ದಾರೆ ಎಂದು ಕಾಂಗ್ರೆಸ್ ದೂರಿನಲ್ಲಿ ಆರೋಪಿಸಿದೆ.
ಮತದಾರರ ಮೇಲೆ ಪ್ರಭಾವ ಬೀರಲು ಪ್ರೇರೇಪಿಸುವುದೂ ಕೂಡ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಈ ಹಿನ್ನಲೆ ಯದುವೀರ್ ಸಭೆಯಲ್ಲಿ ಭಾಗವಹಿಸಿದ್ದ ವ್ಯಕ್ತಿಗಳು ಹಾಗೂ ಆಮಿಷವೊಡ್ಡಿದವರರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…