ಮೈಸೂರು: ಯಾರೋ ಇಬ್ಬರು ಮೂವರು ಪಕ್ಷ ತೊರೆದು ಹೋದರೆ ತಲೆ ಕೆಡಿಸಿಕೊಳ್ಳುವುದಿಲ್ಲ. ನಮ್ಮ ಪಕ್ಷಕ್ಕೆ ಸಾವಿರಾರು ಮಂದಿ ಬರುವವರಿದ್ದಾರೆ ಎಂದು ಮಾಜಿ ಶಾಸಕ ಎಲ್. ನಾಗೇಂದ್ರ ಹೇಳಿದ್ದಾರೆ.
ಮಾಜಿ ಮುಡಾ ಅಧ್ಯಕ್ಷ ಎಚ್.ವಿ ರಾಜೇಂದ್ರ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿಕೊಳ್ಳುತ್ತಿರುವ ಸಂಬಂಧ ಅವರು ಈರೀತಿಯ ಪ್ರತಿಕ್ರಿಯ ನೀಡಿದ್ದಾರೆ.
ನಗರದಲ್ಲಿಂದು ಮಾಧ್ಯಮಳೊಂದಿಗೆ ಮಾತನಾಡಿದ ಅವರು, ಎಚ್.ವಿ ರಾಜೇಂದ್ರ ಅವರು ಪಕ್ಷ ತೊರೆಯುವುದರಿಂದ ನಮಗೆ ಯಾವುದೇ ತೊಂದರೆಯಿಲ್ಲ ಹಾಗೂ ಪಕ್ಷಕ್ಕೂ ಯಾವುದೇ ಡ್ಯಾಮೆಜ್ ಆಗುವುದಿಲ್ಲ ಎಂದು ತಿಳಿಸಿದರು.
ಅವರು ನಮ್ಮ ಪಕ್ಷಕ್ಕೆ ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಅವರ ಮನವೊಲಲಿಸುವ ಕೆಲಸ ನಾವು ಮಾಡುವುದಿಲ್ಲ. ವಿಧಾನಸಭಾ ಚುನಾವಣೆ ವೇಳೆ ನಮ್ಮ ಪಕ್ಷದ ವಿರುದ್ಧವಾಗಿ ಅವರು ಕೆಲಸ ಮಾಡಿದ್ದರು. ಚುನಾವಣಾ ಸಂದರ್ಭದಲ್ಲಿ ಪಕ್ಷಾಂತರ ಪರ್ವ ಸಹಜ ಎಂದು ವಿವರಿಸಿದರು.
ಇನ್ನೂ ಮೈಸೂರು-ಕೊಡಗು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಲಕ್ಷ್ಮಣ್ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ಒಕ್ಕಲಿಗ ವಿರೋಧಿ ಪಕ್ಷವಾಗಿದೆ. ಒಕ್ಕಲಗರಿಗೆ ಟಿಕೆಟ್ ನೀಡಲು ಕಾಂಗ್ರೆಸ್ 41 ವರ್ಷ ಸಮಯ ತೆಗೆದುಕೊಂಡಿದೆ. ಲಕ್ಷ್ಮಣ್ ಬಿಟ್ಟರೇ ಕಾಂಗ್ರೆಸ್‌ನಲ್ಲಿ ಬೇರಾರೂ ಇರಲಿಲ್ಲವಾ. ಇದಕ್ಕಿಂತ ಮುಂಚೆ ಯಾಕೆ ಕಾಂಗ್ರೆಸ್ ಒಕ್ಕಲಿಗ ಸಮುದಾಯಕ್ಕೆ ಅವಕಾಶ ನೀಡಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್ ಪ್ರತಿಭಟನೆಗೆ ಕರೆ ನೀಡಿತ್ತು. ಈ…
ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ದೇವಿಯ ಕೃಪೆ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…
ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…
ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…