ಮೈಸೂರು

ಕಾಂಗ್ರೆಸ್ಸೇ ಅಹಿಂದ : ಸಿಎಂ ಸಿದ್ದರಾಮಯ್ಯಗೆ ಹಳ್ಳಿಹಕ್ಕಿ ವಿಶ್ವನಾಥ್‌ ಟಾಂಗ್‌

ಮೈಸೂರು : ಕಾಂಗ್ರೆಸ್ ಪಕ್ಷ ಎಂದರೆ ಅದು ಅಹಿಂದ. ಅದನ್ನು ಅರಿಯದೆ ಅಹಿಂದ ಸಮಾವೇಶ ಮಾಡಿ ಕಾಂಗ್ರೆಸ್ ಪಕ್ಷವನ್ನು ಮುಚ್ಚಲು ಹೊರಟಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಟಾಂಗ್‌ ನೀಡಿದ್ದಾರೆ.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಎಂದರೆ ಏನು ಎಂದೇ ತಿಳಿದುಕೊಂಡಿಲ್ಲ. ಕಾಂಗ್ರೆಸ್‌ ಏ ಅಹಿಂದ. ಇವರೇನು ಅಹಿಂದ ಸಮಾವೇಶ ಮಾಡೋದು. ಕಾಂಗ್ರೆಸ್ ಪಕ್ಷಕ್ಕೆ ಇಷ್ಟೆಲ್ಲಾ ಅನ್ಯಾಯವಾಗುತ್ತಿದ್ದರೂ ಹಿರಿಯ ನಾಯಕರು ಸೊಲ್ಲೆತ್ತುತ್ತಿಲ್ಲ ಎಂದು ಛೇಡಿಸಿದರು.

ಇದನ್ನು ಓದಿ:ಮೈಸೂರು ಅರಮನೆ ವೀಕ್ಷಣೆಗೂ ಬಂಕಿಂಗ್‌ ಹ್ಯಾಮ್‌ ಮಾದರಿ ತರಲಿ : ವಿಶ್ವನಾಥ್‌ ಆಗ್ರಹ

ಡಿ.ಕೆ.ಶಿವಕುಮಾರ್ ಅವರು ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ದುಡಿದಿದ್ದಾರೆ , ಪಕ್ಷವನ್ನು ಕಟ್ಟಿದ್ದಾರೆ. ಅವರಿಗೆ ಮುಖ್ಯಮಂತ್ರಿ ಸ್ಥಾನ ಕೊಡಬೇಕು. ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯ ಇಲ್ಲ ಎಂಬಂತಾಗಬಾರದು ಎಂದು ಹೇಳಿದರು.

ಇನ್ನೂ ಅರಮನೆ ಉಳಿಸುವ ಸಂಬಂಧ ಮಾತನಾಡಿದ ಅವರು, ಅರಮನೆ ಉಳಿಸುವ ಸಂಬಂಧ ಪ್ರವಾಸೋದ್ಯಮ ಇಲಾಖೆ, ಪುರಾತತ್ವ ಇಲಾಖೆ ಮಂತ್ರಿಗಳು ಸಭೆ ಕರೆಯಬೇಕು. ಅರಮನೆ ಬಗ್ಗೆ ಆಸಕ್ತಿ ಹೊಂದಿರುವ ತಜ್ಞರು, ಪತ್ರಕರ್ತರನ್ನು ಒಳಗೊಂಡಂತೆ ಸಭೆನಡೆಯಬೇಕು. ಅರಮನೆ ನಿರ್ವಹಣೆಯ ರೂಪುರೇಷೆಗಳು ಅಲ್ಲಿ ಚರ್ಚೆಯಾಗಬೇಕು ಎಂದರು.

ಮಂಡಳಿ ಉಪ ನಿರ್ದೇಶಕ ಸುಬ್ರಹ್ಮಣ್ಯ ನಿವೃತ್ತಿ ಹೊಂದುತ್ತಿದ್ದಾರೆ. ಆದರೆ ಅವರನ್ನು ಮೂರು ವರ್ಷಗಳ ಕಾಲ ಮುಂದುವರೆಸಲು ಹುನ್ನಾರ ನಡೆಯುತ್ತಿದೆ. ಇದಾಗಬಾರದು ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

26 mins ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

50 mins ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

1 hour ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

1 hour ago

ರಾಷ್ಟ್ರಪಿತನ‌ ಹೆಸರನ್ನೇ ಅಳಿಸುವ ಪಿತೂರಿಯನ್ನು ಸೋಲಿಸೋಣ : ಸಿ.ಎಂ.ಸಿದ್ದರಾಮಯ್ಯ ಕರೆ

ಬೆಂಗಳೂರು : ಕಾಂಗ್ರೆಸ್‌ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ. ಇದೊಂದು ಚಳುವಳಿ ಮತ್ತು ಸಿದ್ಧಾಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

1 hour ago

ಬೀದಿನಾಯಿ ದಾಳಿ : ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರಿಗೆ ಗಾಯ

ಗೋಣಿಕೊಪ್ಪ : ಪಟ್ಟಣದಲ್ಲಿ ಬೀದಿನಾಯಿ ದಾಳಿಗೆ ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ಸ್ಥಳೀಯರು ಮತ್ತಷ್ಟು…

1 hour ago