ಮೈಸೂರು: ಮುಡಾ ಸೈಟು ಹಂಚಿಕೆ ವಿಚಾರದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಪ್ರಾಸಿಕ್ಯೂಷನ್ ಕ್ರಮವನ್ನು ಖಂಡಿಸಿ ಸಿಎಂ ತವರಲ್ಲಿ ಕಾಂಗ್ರಸ್ ಬೃಹತ್ ಪ್ರತಿಭಟನೆ ನಡೆಸುತ್ತಿದೆ.
ನಗರದ ಗಾಂಧಿ ವೃತ್ತದ ಬಳಿ ಪ್ರತಿಭಟನಾ ಸಮಾವೇಶದಲ್ಲಿ ಸೇರಿದ್ದ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲರ ವಿರುದ್ಧ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಈ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌ಸಿ ಮಹದೇವಪ್ಪ, ಬಿಜೆಪಿ ಅವರಿಗೆ ಸಂವಿಧಾನದ ಮೇಲೆ ನಂಬಿಕೆಯಿಲ್ಲ. ರಾಜ್ಯಪಾಲರನ್ನು ಬಳಸಿಕೊಂಡು ರಾಜಕೀಯ ಪಿತೂರಿಯ ಮೂಲಕ ಆಡಳಿತ ಪಕ್ಷವನ್ನು ನೆಲಸಮಗೊಳಿಸುವ ಷಡ್ಯಂತರವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರು ಕೇಂದ್ರದ ಕೈಗೊಂಬೆಯಾಗಿದ್ದಾರೆ. ರಾಜಭವನವನ್ನು ರಾಜಕೀಯ ಅಂಗಳವನ್ನಾಗಿ ಮಾಡಲಾಗಿದೆ ಎಂದು ಕಿಡಿಕಾರಿದರು.
ಶಾಸಕರಾದ ತನ್ವೀರ್ ಸೇಠ್, ಕೆ.ಹರೀಶ್ ಗೌಡ, ರವಿಶಂಕರ್, ದರ್ಶನ್ ಧ್ರುವನಾರಾಯಣ್, ಅನಿಲ್ ಚಿಕ್ಕಮಾದು, ಎಂಎಲ್‌ಸಿ ಡಿ.ತಿಮ್ಮಯ್ಯ, ಉಮಾಶ್ರೀ, ಗ್ಯಾರೆಂಟಿ ಯೋಜನಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷೆ ಪುಷ್ಪ ಅಮರನಾಥ್, ಎಂ. ಲಕ್ಷ್ಮಣ್, ಕಾಂಗ್ರೆಸ್ ಜಿಲ್ಲಾ ಗ್ರಾಮಾಂತರ ಸಮಿತಿ ಅಧ್ಯಕ್ಷ ಬಿ.ಜೆ ವಿಜಯ್‌ಕುಮಾರ್, ಮುಡಾ ಅಧ್ಯಕ್ಷ ಮರಿಗೌಡ, ಆಯೂಬ್ ಖಾನ್, ಎಂ.ಕೆ ಸೋಮಶೇಖರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…