ಮೈಸೂರು

ಕೊಲೆ ಪ್ರಕರಣಗಳನ್ನು ಲಘುವಾಗಿ ಪರಿಗಣಿಸಿದ ಕಾಂಗ್ರೆಸ್: ವಾಳವಿಕ ಅವಿನಾಶ್

ಮೈಸೂರು : ರಾಜ್ಯದಲ್ಲಿ ನಡೆಯುತ್ತಿರುವ ಭಯೋತ್ಪಾದನಾ ಕೃತ್ಯ, ಕೊಲೆಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಬಹಳ ಲಘುವಾಗಿ ತೆಗೆದುಕೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್ ಆರೋಪಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣವನ್ನು ರಾಜ್ಯ ಸರ್ಕಾರ ಬಹಳ ಲಘುವಾಗಿ ತೆಗೆದುಕೊಂಡಿತ್ತು. ಎನ್‌ಐಎ ತನಿಖೆ ನಡೆಸಿ, ಆರೋಪಿಗಳನ್ನು ಕೊಲ್ಕತ್ತಾದಲ್ಲಿ ಬಂಧಿಸಿದೆ. ಆರೋಪಿಗಳು ತಮಿಳುನಾಡಿನಲ್ಲಿ ಅವಿತುಕೊಂಡಿದ್ದರು. ಇದನ್ನೆಲ್ಲಾ ನೋಡಿದರೆ ಇಂಡಿಯಾ ಒಕ್ಕೂಟ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ತಮಗೆ ಆಶ್ರಯ ಸಿಗಬಹುದೆಂದು ಭೋಂತ್ಪಾದಕರು ಭಾವಿಸಿದಂತಿದೆ ಎಂದರು.

ಕಾಂಗ್ರೆಸ್ ಸರ್ಕಾರ ಒಂದು ಜನಾಂಗದವರನ್ನು ಓಲೈಸುವುದರಿಂದ ಕೊಲೆಗಳು ನಡೆಯುತ್ತಿವೆ. ಜನರಿಗೆ ರಕ್ಷಣೆ ಇಲ್ಲದಂತಾಗಿದೆ, ಜನರ ರಕ್ಷಣೆಯನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಆರೋಪಿಸಿದರು.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಮಾತನಾಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಹೆಣ್ಣು ಮಕ್ಕಳ ಕೊಲೆ, ಅತ್ಯಾಚಾರಗಳು ಹೆಚ್ಚಾಗಿದೆ. ಒಂದು ಸಮುದಾಯದ ಓಲೈಕೆಗೆ ಸರ್ಕಾರ ಮುಂದಾಗಿದೆ. ನಮ್ಮ ಹೆಣ್ಣು ಮಕ್ಕಳನ್ನ ನಾವೇ ರಕ್ಷಣೆ ಮಾಡಿಕೊಳ್ಳಬೇಕಿದೆ. ಇಂತಹ ಸರ್ಕಾರಕ್ಕೆ ಜನರು ಏ.೨೬ ರಂದು ತಕ್ಕ ಪಾಠ ಕಲಿಸುತ್ತಾರೆ ಎಂದರು.

ಗ್ಯಾರಂಟಿ ಯೋಜನೆಗಳಿಗೆ ವಿವಿಧ ಹಿಂದುಳಿದ ವರ್ಗಗಳ ಸಮುದಾಯಕ್ಕೆ ನೀಡುತ್ತಿದ್ದ ಅನುದಾನ ಬಳಸಿಕೊಂಡಿದ್ದಾರೆ. ಆ ಮೂಲಕ ಹಿಂದುಳಿದ ವರ್ಗಗಳಿಗೆ ದ್ರೋಹ ಮಾಡಿದ್ದಾರೆ. ಸರ್ಕಾರದ ಖಜಾನೆ ಖಾಲಿಯಾಗಿದೆ. ಹಳೆ ಡಬ್ಬ, ಖಾಲಿ ಸೀಸ ಎಂಬಂತ ಪರಿಸ್ಥಿತಿ ರಾಜ್ಯಸರ್ಕಾರಕ್ಕೆ ನಿರ್ಮಾಣವಾಗಿದೆ ಎಂದರು.

ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ರಾಜ್ಯದಲ್ಲಿಯೂ ಅತಿ ಹೆಚ್ಚು ಸ್ಥಾನವನ್ನ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ, ವಿಧಾನಪರಿಷತ್ ಮಾಜಿ ಸದಸ್ಯ ಸಿದ್ದರಾಜು, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ, ನಗರ ಪ್ರಧಾನ ಕಾರ್ಯದರ್ಶಿ ಕೇಬಲ್ ಮಹೇಶ್, ಗ್ರಾವಾಂತರ ವಕ್ತಾರ ದಾಂನಂದ ಪಾಟೀಲ್, ಮಾಧ್ಯಮ ಸಂಚಾಲಕರಾದ ಮಹೇಶ್ ರಾಜೇ ಅರಸ್, ಮಹದೇವಸ್ವಾಮಿ, ಬಿ.ಎಂ.ಸಂತೋಷ್ ಕುವಾರ್, ವಸಂತಕುವಾರ್ ಮತ್ತಿತರರು ಉಪಸ್ಥಿತರಿದ್ದರು.

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

20 mins ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

33 mins ago

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

44 mins ago

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

1 hour ago

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

1 hour ago

ಸಮ್ಮೇಳನಕ್ಕೆ ಕ್ಷಣಗಣನೆ | ಸಮ್ಮೇಳನ ಸರ್ವಾಧ್ಯಕ್ಷ ಗೊ.ರು ಚನ್ನಬಸಪ್ಪಗೆ ಆತ್ಮೀಯ ಸ್ವಾಗತ

ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…

2 hours ago